ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ, ಬಿಜೆಪಿ ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ!

Published : Apr 02, 2023, 08:17 PM IST
ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ, ಬಿಜೆಪಿ ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ!

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಮ ನವಮಿ ಆಚರಣೆ ವೇಳೆ ಆರಂಭಗೊಂಡ ಗಲಭೆ ಇಂದು ಮತ್ತೆ ಹೆಚ್ಚಾಗಿದೆ.ಹೂಗ್ಲಿಯಲ್ಲಿ ಬಿಜೆಪಿ ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಾಗಿದೆ. 

ಕೋಲ್ಕತಾ(ಏ.02): ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರ ರಾಮ ನವಮಿ ಆಚರಣೆಗೆ ಪಶ್ಚಿಮ ಬಂಗಾಳದಲ್ಲಿ ಅವಕಾಶವೇ ಸಿಗುತ್ತಿಲ್ಲ. ರಾಮ ನವಮಿ ಆಚರಣೆ, ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ, ಹಲ್ಲೆ, ಹಿಂಸಾಚಾರಗಳು ವರದಿಯಾಗುತ್ತಲೇ ಇದೆ. ಇದೀಗ ಹೊಗ್ಲಿಯಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರ ಶೋಭ ಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಶೋಭಯಾತ್ರೆಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಪಾಲ್ಗೊಂಡಿದ್ದರು. ಶಾಂತಿಯುತವಾಗಿ ಸಾಗುತ್ತಿದ್ದ ಶೋಭ ಯಾತ್ರೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇಟ್ಟಿಗೆಗಳನ್ನು ತೂರಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಬಿಜೆಪಿ, ವಿಶ್ವಹಿಂದೂ ಪರಿಷತ್ ಹಾಗೂ ಇತರ ಹಿಂದೂ ಸಂಘಟನೆಗಳು ರಾಮ ನವಮಿ ಶೋಭಯಾತ್ರೆ ಆಯೋಜಿಸಿತ್ತು. ಹೂಗ್ಲಿಯಲ್ಲಿ ಆಯೋಜಿಸಿದ ಈ ಯಾತ್ರೆಗೆ ಸುಗಮವಾಗಿ ಸಾಗಿಲ್ಲ. ಹಿಂಸಾಚಾರ, ಹಲ್ಲೆ ನಡೆದಿದೆ. ಈ ದಾಳಿಯಲ್ಲಿ ಬಿಜೆಪಿ ಶಾಸಕ ಬಿಮನ್ ಘೋಷ್ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪವಿತ್ರ ರಾಮ ನವಮಿ ಆಚರಣೆಗೆ ಅಡ್ಡಿ, ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ!

ಪಶ್ಚಿಮ ಬಂಗಾಳದ ಹೌರ ಜಿಲ್ಲೆಯಲ್ಲಿ ಹಿಂಸಾಚಾರ ನಡೆದ ಪರಿಸ್ಥಿತಿ ಶಾಂತವಾಗುತ್ತಿದ್ದಂತೆ ಇದೀಗ ಹೂಗ್ಲಿಯಲ್ಲಿ ಮತ್ತೆ ಗಲಭೆ ಶುರುವಾಗಿದೆ. ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಗುರುವಾರ ಆರಂಭವಾಗಿದ್ದ ಹಿಂಸಾಚಾರ ಶುಕ್ರವಾರವೂ ಮುಂದುವರೆದಿತ್ತು. ಪೊಲೀಸರ ಹರಸಾಹಸದಿಂದ ಹೌರದಲ್ಲಿ ಪರಿಸ್ಥಿತಿ ಶಾಂತಗೊಳ್ಳುತ್ತಿದೆ. ಅಷ್ಟರಲ್ಲೇ ಹೂಗ್ಲಿಯಲ್ಲಿ ಹಿಂಸಾಚಾರ ಶುರುವಾಗಿದೆ.

ಶಿಬ್‌ಪುರದಲ್ಲಿ ಗುರುವಾರ ಹಿಂಸಾಚಾರ ನಡೆದಿತ್ತು. ಈ ಸ್ಥಳವನ್ನು ಶುಕ್ರವಾರ ಜನ ಸಂಚಾರಕ್ಕೆ ತೆರವು ಮಾಡಲಾಗಿತ್ತು. ಆದರೆ ಮಧ್ಯಾಹ್ನ 1.30ರ ಸುಮಾರಿಗೆ ಉದ್ರಿಕ್ತರು ರಸ್ತೆಗೆ ಇಳಿದು, ಅಂಗಡಿಗಳ ಮೇಲೆ ದಾಳಿ ಮಾಡಿ ಪುಡಿಗಟ್ಟಿಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಾಟ ನಡೆಸಿ, ಕೆಲವು ಪೊಲೀಸ್‌ ವಾಹನಗಳನ್ನೂ ಜಖಂಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಸುಮಾರು 45 ಜನರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಪೊಲೀಸ್‌ ವಾಹನಗಳು ಸೇರಿದಂತೆ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಈ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಹೌರಾದಲ್ಲಿ ಸಿಆರ್‌ಪಿಸಿ 144 ಸೆಕ್ಷನ್‌ ಹೇರಲಾಗಿದೆ.

 

ಬಂಗಾಳದಲ್ಲಿ ಮತ್ತೆ ಹಿಂಸಾಚಾರ: 45 ಮಂದಿ ಬಂಧನ, ನಿಷೇಧಾಜ್ಞೆ ಜಾರಿ; ಘಟನೆಗೆ ಬಿಜೆಪಿ ಕಾರಣ ಎಂದ ದೀದಿ

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಪ್ರತಿ ಹಬ್ಬ, ಆಚರಣೆಗೆ ಅಡ್ಡಿ ಪಡಿಸಲಾಗುತ್ತದೆ. ಒಂದಲ್ಲೂ ಒಂದು ಜಿಲ್ಲೆಯಲ್ಲಿ ಕಲ್ಲು ತೂರಾಟ ನಡೆಸಲಾಗುತ್ತಿದೆ. ಇದರ ಹಿಂದೆ ಆಡಳಿತರೂಢ ಮಮತಾ ಬ್ಯಾನರ್ಜಿ ಸರ್ಕಾರದ ಕೈವಾಡವಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಪ್ರತಿ ಕಾರ್ಯಕ್ರಮಕ್ಕೂ ಅಡ್ಡಿ ಮಾಡಲಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಬಿಹಾರದ ಸಸಾರಾಂನಲ್ಲೂ 2 ಗುಂಪುಗಳ ನಡುವೆ ಘರ್ಷಣೆಗಳು ನಡೆದಿದ್ದು, ನಿಷೇದಾಜ್ಞೆ ಹೇರಲಾಗಿದೆ. ಗುರುವಾರ ಹಿಂಸಾಚಾರ ನಡೆದ ಮಹಾರಾಷ್ಟ್ರ ಮತ್ತು ಗುಜರಾತ್‌ಗಳಲ್ಲಿ ಪರಿಸ್ಥಿತಿ ಶಾಂತವಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಹೊತ್ತಿದ ಕಿಡಿ ಆರುತ್ತಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ