ಕೊಪ್ಪಳದಲ್ಲಿ ಬೀದಿನಾಯಿ ಡೆಡ್ಲಿ ಅಟ್ಯಾಕ್! ಶಾಲಾ ಆವರಣದಲ್ಲಿ ಆಟವಾಡ್ತಿದ್ದ ಮಗುವಿನ ಮೇಲೆ ದಾಳಿ, ಗಂಭೀರ ಗಾಯ

Published : Aug 16, 2025, 01:16 PM IST
Koppal stray Dog attack

ಸಾರಾಂಶ

ಕೊಪ್ಪಳ ಜಿಲ್ಲೆಯ ತಳಕಲ್ ಗ್ರಾಮದಲ್ಲಿ ಬೀದಿನಾಯಿಯೊಂದು ಶಾಲಾ ಆವರಣಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ದಾಳಿ ನಡೆಸಿದೆ. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕೊಪ್ಪಳ (ಆ.16): ಬೀದಿನಾಯಿಯೊಂದು ಶಾಲಾ ಆವರಣಕ್ಕೆ ಏಕಾಏಕಿ ನುಗ್ಗಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಕೆಲವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ನಿನ್ನೆಯಿಂದ ಈ ಬೀದಿನಾಯಿ ಗ್ರಾಮದಲ್ಲಿ ಓಡಾಡುತ್ತಿದ್ದು, ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮತ್ತು ಶಿಕ್ಷಕರ ಮೇಲೆ ದಾಳಿ ನಡೆಸಿದೆ. ಈ ದಾಳಿಯಿಂದ ವೃದ್ಧರು ಮಕ್ಕಳು ಸೇರಿದಂತೆ ಇಡೀ ಗ್ರಾಮಸ್ಥರೇ ಭಯಭೀತರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಗರಗಳಲ್ಲಿ ಬೀದಿನಾಯಿಗಳ ದಾಳಿಯ ಪ್ರಕರಣಗಳು ಹೆಚ್ಚಾಗಿದ್ದವು, ಆದರೆ ಇದೀಗ ಹಳ್ಳಿಗಳಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಗಾಯಾಳುಗಳಿಗೆ ತಕ್ಷಣವೇ ವೈದ್ಯಕೀಯ ಸಹಾಯ ಒದಗಿಸಲಾಗಿದ್ದು, ರೇಬಿಸ್ ಲಸಿಕೆಯನ್ನೂ ನೀಡಲಾಗಿದೆ.

ಗ್ರಾಮ ಪಂಚಾಯ್ತಿ ವಿರುದ್ಧ ಆಕ್ರೋಶ:

ಈ ಘಟನೆಯಿಂದ ಕೆರಳಿರುವ ಗ್ರಾಮಸ್ಥರು ಗ್ರಾಮ ಪಂಚಾಯತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಪಂಚಾಯತಿ ವಿಫಲವಾಗಿದೆ ಎಂದು ಆರೋಪಿಸಿ, ತಕ್ಷಣದ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ