ಪರೀಕ್ಷೆಯಲ್ಲಿ ಫೇಲ್‌: 300 ವಿದ್ಯಾರ್ಥಿಗಳ ಅಂಕಪಟ್ಟಿ ಕದಿಯಲು ಮುಂದಾದ ಭೂಪ!

Suvarna News   | Asianet News
Published : Jan 13, 2020, 10:46 AM ISTUpdated : Jan 13, 2020, 06:57 PM IST
ಪರೀಕ್ಷೆಯಲ್ಲಿ ಫೇಲ್‌:  300 ವಿದ್ಯಾರ್ಥಿಗಳ ಅಂಕಪಟ್ಟಿ ಕದಿಯಲು ಮುಂದಾದ ಭೂಪ!

ಸಾರಾಂಶ

ಪರೀಕ್ಷೆಯಲ್ಲಿ ಅನುತ್ತೀರ್ಣ| ವಿಶ್ವವಿದ್ಯಾಲಯಕ್ಕೆ ನುಗ್ಗಿ ಅಂಕಪಟ್ಟಿ ಕಳ್ಳತನಕ್ಕೆ ಯತ್ನಿಸಿದ ವಿದ್ಯಾರ್ಥಿ|  ಬೆಳಗಾವಿ ರಾಣಿ ಚನ್ನಮ್ಮ ವಿವಿಯಲ್ಲಿ ನಡೆದ ಘಟನೆ| ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ವಿವಿ ಸಿಬ್ಬಂದಿ|

ಬೆಳಗಾವಿ(ಜ.13): ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾಲಯಕ್ಕೆ ನುಗ್ಗಿ ಅಂಕಪಟ್ಟಿ ಕಳ್ಳತನಕ್ಕೆ ಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ನಗರದ ರಾಣಿ ಚನ್ನಮ್ಮ ವಿವಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ನಿವಾಸಿ ಬಸಪ್ಪ ಹೊನವಾಡ (23) ಎಂದು ಗುರುತಿಸಲಾಗಿದೆ. 

"

ಬಸಪ್ಪ ಹೊನವಾಡ ಜಮಖಂಡಿ ತಾಲೂಕಿನ ಹುನ್ನೂರ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಬಿ.ಕಾಂ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದನು. ಹಲವು ಸೆಮಿಸ್ಟರ್‌ನಲ್ಲಿ ಫೇಲ್ ಆಗಿದ್ದನು. ಹಲವು ಬಾರಿ ಮರು ಪರೀಕ್ಷೆ ಬರೆದರೂ ಪಾಸಾಗಿಲ್ಲ ಎಂದು ಬಸಪ್ಪ ಹೊನವಾಡ ಹತಾಶೆಯಾಗಿದ್ದನು. ಹಲವು ಬಾರಿ ಪರೀಕ್ಷೆ ಬರೆದರೂ ನೀವು ನನ್ನನ್ನು ಪಾಸ್ ಮಾಡುತ್ತಿಲ್ಲ ಎಂದು ಮೌಲ್ಯಮಾಪನ ಕುಲಸಚಿವರೊಂದಿಗೆ ಜಗಳ ಕೂಡ ಮಾಡಿದ್ದ ಎನ್ನಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಆಗ ಮರು ಮೌಲ್ಯಮಾಪನಕ್ಕೆ ಹಾಕುವಂತೆ ಬಸಪ್ಪ ಹೊನವಾಡನಿಗೆ ಕುಲಸಚಿವರು ಸಲಹೆ ನೀಡಿದ್ದರು. ಆದರೆ ಅಷ್ಟಕ್ಕೆ ಸುಮ್ಮನಾಗದ ಬಸಪ್ಪ ಕುಲಸಚಿವರಿಗೆ ಅವಾಚ್ಯ ಶಬ್ಧಗಳಿಂದ ಬೈದಿದ್ದನು ಎಂದು ತಿಳಿದು ಬಂದಿದೆ. 
ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಲು ಜನವರಿ 10ರ ರಾತ್ರಿ ಬೆಳಗಾವಿಗೆ ಬಂದಿದ್ದನು. ಜ.11ರ ತಡರಾತ್ರಿ 1.30ಕ್ಕೆ ಶೌಚಾಲಯದ ಮುಖಾಂತರ ಕಚೇರಿ ಒಳಗಡೆ ನುಗ್ಗಿದ್ದ ಬಸಪ್ಪ ರಾತ್ರಿ 3 ಗಂಟೆಗಳ ಕಚೇರಿಯೊಳಗೆ ಇದ್ದು 300 ಪ್ರಮಾಣ ಪತ್ರ ಹಾಗೂ ಸ್ಕ್ಯಾನರ್ ಕದ್ದು‌ ಪರಾರಿಗೆ ಯತ್ನಿಸಿದ್ದನು. 

ಈ ವೇಳೆ ಆರೋಪಿ ಬಸಪ್ಪ ಸೆಕ್ಯೂರಿಟಿ ಗಾರ್ಡ್‌ಗೆ ಸಿಕ್ಕಿ ಬಿದ್ದಿದ್ದಾನೆ. ಬಳಿಕ ವಿವಿ ಸಿಬ್ಬಂದಿ ಆರೋಪಿ ಬಸಪ್ಪನನ್ನ ಹಿಡಿದು ಕಾಕತಿ ಪೊಲೀಸರಿಗೆ ಒಪ್ಪಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!