
ಬೆಂಗಳೂರು(ಜೂ.07): ಜೀವನದಲ್ಲಿ ಜಿಗುಪ್ಸೆಗೊಂಡ ಪದವಿ ವಿದ್ಯಾರ್ಥಿಯೊಬ್ಬ ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಪಂತರಪಾಳ್ಯದ ನಿವಾಸಿ ಸುರೇಶ್ (20) ಮೃತ ದುರ್ದೈವಿ. ಸಂಜೆ 4.45ರ ಸುಮಾರಿಗೆ ಏಕಾಏಕಿ ಮೇಲ್ಸೇತುವೆಯಿಂದ ಸುರೇಶ್ ಜಿಗಿದಿದ್ದು, ತಕ್ಷಣವೇ ಆತನನ್ನು ರಕ್ಷಿಸಿದ ಸಾರ್ವಜನಿಕರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂಪ್ಲಿ: ಹೆಂಡ್ತಿ ಕೊಲೆಗೈದ ಆರೋಪ, ನೇಣಿಗೆ ಶರಣಾದ ಗಂಡ
ಯಾದಗಿರಿ ಜಿಲ್ಲೆಯ ಕೂಲಿ ಕಾರ್ಮಿಕ ಸೈದಪ್ಪ ದಂಪತಿ ಪುತ್ರ ಸುರೇಶ್, ವಿಜಯನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮ ವೈಫಲ್ಯ, ವ್ಯಾಸಂಗದಲ್ಲಿ ಹಿನ್ನಡೆ ಸೇರಿದಂತೆ ಎಲ್ಲ ಆಯಾಮದಲ್ಲೂ ತನಿಖೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ