ಸಿಲಿಕಾನ್ ಸಿಟಿ ಬೆಂಗಳೂರು ಹೊಸವರ್ಷಾಚರಣೆ ಸಂಭ್ರಮದಲ್ಲಿರುವಾಗಲೇ ಇತ್ತ ವಿದ್ಯಾರ್ಥಿನಿಯೋರ್ವಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸುಧಾಮನಗರದಲ್ಲಿ ನಡೆದಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿ.
ಬೆಂಗಳೂರು (ಜ.1): ಸಿಲಿಕಾನ್ ಸಿಟಿ ಬೆಂಗಳೂರು ಹೊಸವರ್ಷಾಚರಣೆ ಸಂಭ್ರಮದಲ್ಲಿರುವಾಗಲೇ ಇತ್ತ ವಿದ್ಯಾರ್ಥಿನಿಯೋರ್ವಳು ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸುಧಾಮನಗರದಲ್ಲಿ ನಡೆದಿದೆ.
ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿ. ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಾಂಗ ಮಾಡುತ್ತಿದ್ದ ಯುವತಿ, ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದಳು. ಆದರೆ ಇದಕ್ಕಿದ್ದಂತೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪೋಷಕರು ಶಾಕ್‌ಗೆ ಒಳಗಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಲ್ಸನ್ ಗಾರ್ಡನ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಯುವತಿ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತ್ಮಹತ್ಯೆ ಪ್ರಕರಣ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
undefined
ನ್ಯೂ ಇಯರ್ ಎಣ್ಣೆಪಾರ್ಟಿ ಮುಗಿಸಿ ವಾಪಸ್ಸಾಗುತ್ತಿದ್ದಾಗ ಬೈಕ್ ಅಪಘಾತ ಓರ್ವ ಸಾವು, ಇನ್ನೋರ್ವ ಗಂಭೀರ ಗಾಯ!
ಆಟೋ ಚಾಲಕ ಆತ್ಮಹತ್ಯೆ:
ಮೂಡುಬಿದಿರೆ: ಆಟೋ ಚಾಲಕ ಮನೆಯ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಾಂತ್ಯ ಗ್ರಾಮದ ಕಾಯರ್ ಗುಂಡಿ ನಿವಾಸಿ ಸೋಮೇಶ (54) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೊಡಂಗಲ್ಲು ಮಹಾಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು. ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿದ್ದ ಅವರು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು.
ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ ದುರ್ಮರಣ!
ಅಪಘಾತ ಸಹಿತ ತುರ್ತು ಸಂದರ್ಭದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ಅಸಹಾಯಕರನ್ನು ತನ್ನ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದರಲ್ಲದೆ, ಶವ ಸಂಸ್ಕಾರ ಮಾಡುವಲ್ಲಿಯೂ ಪರೋಪಕಾರಿಯಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 5 ವರ್ಷಗಳ ಹಿಂದೆ ಸೋಮೇಶ್ ಅವರ ಸಹೋದರನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.