ಮಂಗಳೂರು: ಖಾಸಗಿ ವಿಡಿಯೋ ವೈರಲ್, ಬ್ಲ್ಯಾಕ್ ಮೇಲ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

By Girish Goudar  |  First Published Jan 31, 2023, 9:54 PM IST

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕ್ ನಗರದಲ್ಲಿ ನಡೆದ ಘಟನೆ. 


ಮಂಗಳೂರು(ಜ.31): ಖಾಸಗಿ ವಿಡಿಯೋ ವೈರಲ್ ಮಾಡುವ ಬ್ಲ್ಯಾಕ್ ಮೇಲ್‌ಗೆ ಹೆದರಿದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕ್ ನಗರ ಎಂಬಲ್ಲಿ ಇಂದು(ಮಂಗಳವಾರ) ನಡೆದಿದೆ. ಜಿಲ್ಲೆಯ ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಹರ್ಷಿತ್(19) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. 

ಇನ್ಸ್ಟಾಗ್ರಾಂ ಮೂಲಕ ಬಂದ ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್‌ಗೆ ಹೆದರಿ ಹರ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕಳೆದ 15 ದಿನಗಳ ಹಿಂದೆ ಇನ್ಸ್ಟಾಗ್ರಾಂನಲ್ಲಿ ಅಪರಿಚಿತ ವ್ಯಕ್ತಿ ಜೊತೆ ಹರ್ಷಿತ್ ಚಾಟಿಂಗ್ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಅಶ್ಲೀಲ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಅಪರಿಚಿತ ವ್ಯಕ್ತಿ ಹರ್ಷಿತ್‌ಗೆ ಬೆದರಿಕೆ ಹಾಕಿದ್ದಾನೆ. 

Tap to resize

Latest Videos

'ಐ ಲವ್ ಯೂ ಪುತ್ತೂರು': ಕಂಬಳದಲ್ಲಿ ಗಮನ ಸೆಳೆದ ಸಾನಿಯಾ ಅಯ್ಯರ್‌

ಅಪರಿಚಿತ ವ್ಯಕ್ತಿ ಜೊತೆ ಹರ್ಷಿತತ್‌ಗೆ 11 ಸಾವಿರ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಹಣ ಹೊಂದಿಸಲು ಸಾಧ್ಯವಾಗದೇ ಇಲಿ ಪಾಷಣ ಸೇವಿಸಿ ಹರ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ತಿಳಿದು ಬಂದಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!