Suicide: ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

Kannadaprabha News   | Asianet News
Published : Nov 25, 2021, 08:52 AM ISTUpdated : Nov 25, 2021, 08:55 AM IST
Suicide: ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಸಾರಾಂಶ

*  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಘಟನೆ *  ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ *  ಕೋಡಿ ಚಂದ್ರಶೇಖರ್‌ ಆತ್ಮಹತ್ಯೆ  

ಹೊನ್ನಾವರ(ನ.25): ರಾಜ್ಯದ ವಿವಿಧೆಡೆ ಬುಧವಾರ ನಾಲ್ಕು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಉತ್ತರ ಕನ್ನಡ(Uttara Kannada) ಜಿಲ್ಲೆಯ ಹೊನ್ನಾವರ(Honnava) ಪಟ್ಟಣದ ಎಸ್‌ಡಿಎಂ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ಮುಗ್ವಾ ಹಳಗೇರಿ ಮೂಲದ, ಈಗ ಅನಂತವಾಡಿ ಕೋಟಾದಲ್ಲಿ ವಾಸಿಸುತ್ತಿರುವ ವಿಶಾಲ ಗೌಡ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ(Student). ಅವರು ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆಕೊಟ್ಟಿದ್ದಾರೆ. ರೈಲಿನ(Railway) ಗಾಲಿಗೆ ಸಿಕ್ಕು ದೇಹ ಚಿದ್ರವಾಗಿದ್ದು, ರುಂಡ ಒಂದು ಕಡೆ ಮುಂಡ ಒಂದು ಕಡೆ ಬಿದ್ದಿದೆ. ಸ್ಥಳಕ್ಕೆ ಮಂಕಿ ಪೊಲೀಸರು ದೌಡಾಯಿಸಿ ಸಾರ್ವಜನಿಕರ ಸಹಕಾರದಿಂದ ಶವವನ್ನು ಸ್ಥಳಾಂತರಿಸಿದ್ದಾರೆ. ವಿಶಾಲ್‌ ಪ್ರಥಮ ಪಿಯುಸಿಗೆ ಸೇರಿದ ಆನಂತರವಷ್ಟೇ ಕೋಟಾದಿಂದ ಕಾಲೇಜಿಗೆ ಬರುತ್ತಿದ್ದ ಎನ್ನಲಾಗಿದೆ. ತಂದೆ-ತಾಯಿ ಕೃಷಿಕರು. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದು ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಿದೆ.

Youth Suicide | ನಿಶ್ಚಿತಾರ್ಥವಾಗಲಿದ್ದ ಯುವಕನ ಮನೆಗೆ ಬೇರೆ ಯುವತಿ ದಿಬ್ಬಣ : ಯುವಕ ಆತ್ಮಹತ್ಯೆ

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ(ಉಡಪಿ): ಇಲ್ಲಿನ ಮಂಚಿಕುಮೇರಿ ಎಂಬಲ್ಲಿ ಸುಂದರ (50) ಎಂಬವರು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಪರೀತ ಮದ್ಯಪಾನ ಮಾಡುತಿದ್ದ ಅವರು ಮನೆಯಲ್ಲಿ ಜಗಳವಾಡುತ್ತಿದ್ದರು. ಮಂಗಳವಾರ ರಾತ್ರಿ 8.30ಕ್ಕೆ ಮದ್ಯಪಾನ ಮಾಡಿ ಮನೆಗೆ ಬಂದು ಸಾಯುತ್ತೇನೆ ಎಂದು ರೂಮಿನೊಳಗೆ ಹೋಗಿ ಲಾಕ್‌ ಹಾಕಿಕೊಂಡು, ಮಾಡಿಗೆ ಹಗ್ಗ ಕಟ್ಟಿನೇಣು ಬಿಗಿದು ಮೃತಪಟ್ಟಿದ್ದಾರೆ. ಮಣಿಪಾಲ(Manipal) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಧಾರವಾಡ(Dharwad): ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಬೆಳೆಹಾನಿಯಾಗಿ(Crop Damage) ನೊಂದು ರೈತನೋರ್ವ(Farmer) ತಮ್ಮ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. 

ಗ್ರಾಮದ ಈರಪ್ಪ ಬಸಪ್ಪ ಸಾದರ (37) ಆತ್ಮಹತ್ಯೆಗೆ ಶರಣಾದ ರೈತ. ಬೆಳಗ್ಗೆ ಈರಪ್ಪ ಪ್ರತಿದಿನದಂತೆ ನಸುಕಿನ ಜಾವ ಎದ್ದು ದನಗಳ ಕೊಟ್ಟಿಗೆ ಸ್ವಚ್ಛ ಮಾಡ್ದಿ, ಬಳಿಕ ಅದೇ ಹಸುಗಳನ್ನು ಹೊರಗಡೆ ಕಟ್ಟಿ ಬಂದು ದನದ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕೃಷಿ ಚಟುವಟಿಕೆಗಾಗಿ ಗ್ರಾಮದ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ 1 ಲಕ್ಷ, ಸ್ವಸಹಾಯ ಸಂಘದಲ್ಲಿ 1 ಲಕ್ಷ ಹಾಗೂ 2 ಲಕ್ಷ ಕೈಗಡ ಸಾಲ(Loan) ಮಾಡಿದ್ದರು. ಇತ್ತೀಚೆಗೆ ಸುರಿದ ಮಳೆಯಿಂದ ಹೊಲದಲ್ಲಿನ ಈರುಳ್ಳಿ ಬೆಳೆ ಕೊಳೆತಿತ್ತು. ಸಾಲ ತೀರಿಸುವುದು ಹೇಗೆ ಎಂದು ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್‌(Police) ಠಾಣೆಯಲ್ಲಿ ಪ್ರಕರಣ(Case) ದಾಖಲಾಗಿದೆ.

Uttara Kannada| ಅಕಾಲಿಕ ಮಳೆಯಿಂದ ಬೆಳೆ ನಷ್ಟ: ರೈತ ಆತ್ಮಹತ್ಯೆ

ಕೋಡಿ ಚಂದ್ರಶೇಖರ್‌ ಆತ್ಮಹತ್ಯೆ

ಮಡಿಕೇರಿ: ಕೊಡಗು(Kodagu) ಜಿಲ್ಲಾ ಸರ್ವೋದಯ ಸಮಿತಿಯ ಖಜಾಂಚಿ ಹಾಗೂ ಗೌಡ ಸಮಾಜದ ಪದಾಧಿಕಾರಿ ಕೋಡಿ ಚಂದ್ರಶೇಖರ್‌ (54) ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ರಾಘವೇಂದ್ರ ದೇವಾಲಯದ ಸಮೀಪವಿರುವ ತಮ್ಮ ಮನೆಯಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.  ಈ ಸಂಬಂಧ ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತಾಪ: 

ಸರ್ವೋದಯ ಸಮಿತಿಯ ಕೋಡಿ ಚಂದ್ರಶೇಖರ್‌ ನಿಧನಕ್ಕೆ ಕೊಡಗು ಜಿಲ್ಲಾ ಸ್ಥಾಪಕಾಧ್ಯಕ್ಷ ಟಿ.ಪಿ. ರಮೇಶ್‌, ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ಮುರ್ನೀ ಅಹಮ್ಮದ್‌ ಹಾಗೂ ಪದಾಧಿಕಾರಿಗಳು ತೀವ್ರ ಸಂತಾಪ(Condolences) ಸೂಚಿಸಿದ್ದಾರೆ. ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸೂದನ ಈರಪ್ಪ ಅವರು ಚಂದ್ರಶೇಖರ್‌ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ