
ಮೈಸೂರು(ಸೆ.30): ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ.
ಮೃತ ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ರೇಣುಕಾಗೆ ಆಗಾಗ್ಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗಂಡನ ಮುಂದೆಯೇ ಪತ್ನಿ ಮೇಲೆ ಅತ್ಯಾಚಾರ: ವಿಷ ಸೇವಿಸಿ ಸಾವಿಗೆ ಶರಣಾದ ದಂಪತಿ
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್ಐ ರಾಮಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ