ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ

By Kannadaprabha News  |  First Published Sep 21, 2020, 12:50 PM IST

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ| ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ| ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು|


ವಿಜಯಪುರ(ಸೆ.21): ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಮೂಲತಃ ಕಲಬುರಗಿ ನಗರದ ಐಶ್ವರ್ಯ ಶಂಕರ ನಾಟಿಕಾರ (24) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. 

Tap to resize

Latest Videos

ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ

ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈಚೆಗಷ್ಟೇ ಈ ವಿದ್ಯಾರ್ಥಿನಿಗೆ ಮದುವೆಯ ನಿಶ್ಚಿತಾರ್ಥವಾಗಿತ್ತು. ಅಲ್ಲದೆ ಸೋಮವಾರ ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಲಿದ್ದಳು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

click me!