ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ಮೂವರು ಮಕ್ಕಳು ತೀವ್ರ ಅಸ್ವಸ್ಥಗೊಂಡಿರುವ ಪ್ರಕರಣದಲ್ಲಿ ವಿದ್ಯಾರ್ಥಿಯೇ ವಿಷ ಮಿಶ್ರಣ ಮಾಡಿರುವ ಕೃತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ
ಕೋಲಾರ (ನ.28): ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ಮೂವರು ಮಕ್ಕಳು ತೀವ್ರ ಅಸ್ವಸ್ಥಗೊಂಡಿರುವ ಪ್ರಕರಣದಲ್ಲಿ ವಿದ್ಯಾರ್ಥಿಯೇ ವಿಷ ಮಿಶ್ರಣ ಮಾಡಿರುವ ಕೃತ್ಯ ಪೊಲೀಸರ ತನಿಖೆ ವೇಳೆ ಬಯಲಾಗಿದೆ.
ನಿನ್ನೆ ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದ್ದ ಘಟನೆ. ಕಲುಷಿತ ನೀರು ಕುಡಿದು ಗಿರಿಶ್, ಧನು ಮತ್ತು ಡಂಕಣಾಚಾರಿ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು. ಘಟನೆ ಮಾಹಿತಿ ತಿಳಿದು ಶಾಲೆ ಭೇಟಿ ನೀಡಿದ್ದ ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣದ ತನಿಖೆ ವೇಳೆ ವಿದ್ಯಾರ್ಥಿಯಿಂದ ವಿಷ ಮಿಶ್ರಣ ಮಾಡಿರುವ ಆಘಾತಕಾರಿ ವಿಷಯ ಹೊರಬಿದ್ದಿದೆ.
ಕಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು!
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯಿಂದ ಕೃತ್ಯ ನಡೆದಿದೆ. ಆ ವಿದ್ಯಾರ್ಥಿಯೇ ಕುಡಿಯುವ ನೀರಿ ವಿಷ ಮಿಶ್ರಣ ಮಾಡಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಸದ್ಯ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಇತ್ತ ಅಸ್ವಸ್ಥಗೊಂಡ ಮೂವರು ವಿದ್ಯಾರ್ಥಿಗಳಿಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ದಿನನಿತ್ಯ ಕುಡಿದು ಬಂದು ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಕಾಮುಕ ಶಿಕ್ಷಕನ ವರ್ಗಾವಣೆಗೆ ಗ್ರಾಮಸ್ಥರು ಪಟ್ಟು!