Bengaluru Crime: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರೀತಿ ವಿಚಾರಕ್ಕೆ ಎಲ್ಲರೆದುರೇ ವಿದ್ಯಾರ್ಥಿನಿ ಮರ್ಡರ್‌

By Sathish Kumar KH  |  First Published Jan 2, 2023, 3:10 PM IST

ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿಯಲಾಗಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನು ವಿದ್ಯಾರ್ಥಿನಿಗೆ ಚಾಕು ಇರಿದವನು ಬೇರೆ ಕಾಲೇಜಿನ ವಿದ್ಯಾರ್ಥಿ ಆಗಿದ್ದು, ತಾನೂ ಕೂಡ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.


ಬೆಂಗಳೂರು (ಜ.02): ಬೆಂಗಳೂರು ನಗರದ ರಾಜಾನುಕುಂಟೆ ಬಳಿಯಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿಯಲಾಗಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನು ವಿದ್ಯಾರ್ಥಿನಿಗೆ ಚಾಕು ಇರಿದವನು ಬೇರೆ ಕಾಲೇಜಿನ ವಿದ್ಯಾರ್ಥಿ ಆಗಿದ್ದು, ತಾನೂ ಕೂಡ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರೀತಿಯ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ ವೆಂದು ಶಂಕೆ ವ್ಯಪ್ತಪಡಿಸಲಾಗಿದೆ. ಹೊಸ ವರ್ಷದ ಆಚರಣೆ ಮುಗಿಸಿಕೊಂಡು ಇಂದು ಬೆಳಗ್ಗೆ ಕಾಲೇಜಿಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಬಳಿ ಹೋಗಿ ಚಾಕು ತೆಗದುಕೊಂಡು ಹೊಟ್ಟೆ ಮತ್ತು ಇತರೆ ಭಾಗಕ್ಕೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದು, ಬೇರೆ ವಿದ್ಯಾರ್ಥಿಗಳು ಕೂಡ ಹತ್ತರಕ್ಕೆ ಬರದಂತೆ ಚಾಕು ತೋರಿಸಿ ಬೆದರಿಸಿದ್ದಾನೆ. ನಂತರ ಅದೇ ಚಾಕುವಿನಿಂದ ತನ್ನ ಹೊಟ್ಟೆಗೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಗಂಭೀರ ಗಾಯಗೊಂಡು ಬಿದ್ದು ಒದ್ದಾಡುತ್ತಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಜಾನುಕುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. 

Tap to resize

Latest Videos

New year : ಹೊಸ ವರ್ಷದ ಸಂಭ್ರಮಾಚರಣೆಗೆ 2 ಬಲಿ

10ಕ್ಕೂ ಹೆಚ್ಚುಬಾರಿ ಚಾಕು ಇರಿತ: ಕೊಲೆಯಾದ ವಿದ್ಯಾರ್ಥಿನಿಯಲ್ಲಿ ಲಯಸ್ಮಿತ (19 ) ಎಂದು ಗುರುತಿಸಲಾಗಿದೆ. ಕೋಲಾರ ಮೂಲದ ಮೃತ ವಿದ್ಯಾರ್ಥಿನಿ ಬಿಟೆಕ್ ಅಭ್ಯಾಸ ಮಾಡುತ್ತಿದ್ದಳು. ಕಾಲೇಜಿಗೆ ತೆರಳಿದ ಪವನ್ ಕಲ್ಯಾಣ್ ಕ್ಲಾಸ್ ರೂಂ ಅಲ್ಲಿ ಇದ್ದ ಲಯಸ್ಮಿತಾ ಗೆ ಹೊರಗೆ ಬರಲು ಹೇಳಿದ್ದಾನೆ. ಬಳಿಕ 10 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ  ಪವನ್ ಕಲ್ಯಾಣ್ ಕೂಡ ತನಗೆ ಚಾಕುವಿನಿಂದ ಇರಿದುಕೊಂಡಿದ್ದಾನೆ.  ಇನ್ನು ಇಬ್ಬರೂ ಕೂಡ ಒಂದೇ ಊರಿನವರು ಎಂದು ತಿಳಿದುಬಂದಿದೆ. ಆದರೆ, ಪವನ್ ಕಲ್ಯಾಣ್ ಬೇರೆ‌ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದನು. ಪ್ರೀತಿ ವಿಚಾರದಲ್ಲಿ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಸ್ಥಳ ಪರಿಶೀಲನೆ ಮಾಡಿದ ಪೊಲೀಸರು ಮಾಧ್ಯಮಗಳೊಂದಿಗೆ ಮಾತನಾಡಿ, ಯುವತಿ ಮೂಲತಃ ಮುಳಬಾಗಿಲಯ ಮೂಲದವಳು ಆಗಿದ್ದಾಳೆ. ಘಟನೆಯ ಬಗ್ಗೆ ಅವರ ಅಮ್ಮ ರಾಜೇಶ್ವರಿ ಮತ್ತು ಸಂಬಂಧಿಗೆ ಮಾಹಿತಿ ಕೊಟ್ಟಿದ್ದೇವೆ. ಅವರು ಬಂದ ಬಳಿಕ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತದೆ. ಸರಿಯಾಗಿ ಮಧ್ಯಾಹ್ನ 12.58 ಗಂಟೆಗೆ ಘಟನೆ ನಡೆದಿದೆ. ತಕ್ಷಣ ಕಾಲೇಜು ಸೆಕ್ಯೂರಿಟಿ ಗಳು ಸಹಾಯಕ್ಕೆ ಮುಂದಾಗಿದ್ದಾರೆ. ಕಾಲೇಜು ಅಂಬುಲೆನ್ಸ್ ಅಲ್ಲಿ ಯುವತಿಯನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವೇಳೆ ಮಾರ್ಗಮದ್ಯ ಯುವತಿ ಮೃತಪಟ್ಟಿದ್ದಾಳೆ.

ಇನ್ನು ಯುವಕ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಗೆ ಯತ್ನಿಸಿದ್ದನು. ಕಾಲೇಜಿನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ನಂತರ ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿಯನ್ನು ಸಿಬ್ಬಂದಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಇನ್ನು ಯುವಕ ಗಂಭೀರ ಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗಿದೆ. ಯುವಕ ನೃಪತುಂಗ ಯುನಿವರ್ಸಿಟಿಯ  ಬಿಸಿಎ ವಿಧ್ಯಾರ್ಥಿ ಆಗಿದ್ದನು. ಆತನ ಬ್ಯಾಗ್ ನಲ್ಲಿ ಒಂದು ಪುಸ್ತಕ ಸಿಕ್ಕಿದೆ. ಉಳಿದಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. 

click me!