ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ಕೃಷಿ ಕಾರ್ಮಿಕ ಮಹಿಳೆಯರ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಬಿದ್ದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.
ಬೆಳಗಾವಿ (ಫೆ.5): ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ಕೃಷಿ ಕಾರ್ಮಿಕ ಮಹಿಳೆಯರ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಬಿದ್ದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.
ಮೃತ ಮಹಿಳೆಯರನ್ನು ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿಗಳಾದ ಚಂಪಾ ಲಕ್ಕಪ್ಪ ತಳಕಟ್ಟಿ(45), ಭಾರತಿ ವಡ್ಡಲೆ(30), ಮಾಲು ರಾವಸಾಬ್ ಐನಾಪುರ(55) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಶೇಕವ್ವ ನರಸಪ್ಪ ಸರಸಾಯಿ (38) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗದಗ: ವಿದ್ಯಾರ್ಥಿನಿ ಮೊಬೈಲ್‌ಗೆ ಅಶ್ಲೀಲ ಫೋಟೊ, ಪೊಲೀಸರಿಂದಲೇ ಯುವತಿಗೆ ಕಿರುಕುಳ!
ಗ್ರಾಮಸ್ಥರ ಪ್ರಕಾರ, ಮೃತರು ಸೇರಿದಂತೆ ಒಟ್ಟು ಆರು ಮಂದಿ ರೈತ ಕಾರ್ಮಿಕರು ಇಂದು ಬೆಳಗ್ಗೆ ತಮ್ಮ ಗ್ರಾಮದಿಂದ ಕೃಷಿ ಕೆಲಸಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು. ಇನ್ನು ಶೇಡಬಾಳ ಗ್ರಾಮದಿಂದ ಉಗಾರ ಗ್ರಾಮದ ಕಡೆಗೆ ಹೋಗುತ್ತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ನ ಟ್ರಾಲಿಯ ಚಕ್ರ ಮುರಿದು ಟ್ರಾಲಿ ಈ ಪಾದಚಾರಿಗಳ ಮೇಲೆ ಉರುಳಿ ಬಿದ್ದಿತ್ತು. ಮೂವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಮಹಿಳೆಯನ್ನು ತಕ್ಷಣವೇ ಮಹಾರಾಷ್ಟ್ರದ ಮಿರಜ್ ಪಟ್ಟಣದ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಶ್ಲೀಲ ಫೋಟೋ ಇದೆ ಎಂದು ₹65 ಲಕ್ಷ ಸುಲಿಗೆ! ಹುಡುಗಿಯಿಂದಲೂ ಲಕ್ಷ ಲಕ್ಷ ಸುಲಿದ ಮಿತ್ರದ್ರೋಹಿಗಳು!
ಗಮನಕ್ಕೆ ಬಂದ ಕೂಡಲೇ ಕಾಗವಾಡ ಶಾಸಕ ರಾಜು ಕಾಗೆ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ವಿಚಾರಿಸಿ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಎಲ್ಲ ರೀತಿಯ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಕಾಗವಾಡ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.