ಹಿಂದೂ ಅಶ್ಲೀಲ ಪದ ಎಂದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಮನ್ಸ್‌

By Kannadaprabha News  |  First Published Aug 10, 2024, 8:48 AM IST

2022ರ ನವೆಂಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಾರಕಿಹೊಳಿ, ‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು.


ಬೆಂಗಳೂರು(ಆ.10):  ‘ಹಿಂದೂ’ ಎಂಬುದು ಅಶ್ಲೀಲ ಪದ ಎನ್ನುವ ಮೂಲಕ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಆ.27ಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ದಿಲೀಪ್‌ ಕುಮಾರ್‌ ಎಂಬುವರು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ದೂರಿಗೆ ಸಂಬಂಧಿಸಿದಂತೆ ಆ.27ರಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

2022ರ ನವೆಂಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಜಾರಕಿಹೊಳಿ, ‘ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ’ ಎಂದಿದ್ದರು.

Tap to resize

Latest Videos

ಹಿಂದೂ ಧರ್ಮವೇ ಅಲ್ಲ, ಇದೊಂದು ಆನೈತಿಕ, ಅನಾಚಾರ: ಪಂಡಿತರಾಧ್ಯ ಶ್ರೀ

ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ. ಹಿಂದೂ ಎಂಬುದು ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಭಾರತಕ್ಕೂ, ಪರ್ಷಿಯನ್‌ಗೂ ಏನು ಸಂಬಂಧ. ಹಿಂದೂ ಪದ ಹೇಗೆ ನಮ್ಮದಾಯಿತು ಎಂಬ ಬಗ್ಗೆ ಚರ್ಚೆಯಾಗಬೇಕಿದೆ’ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.

click me!