ಗೂಂಡಾ ಕಾಯ್ದೆಯಡಿ ಸುಪಾರಿ ಕಿಲ್ಲರ್‌ ಸೈಫ್‌, ರೌಡಿಶೀಟರ್‌ ಬೈಂದೂರು ರವಿ ಬಂಧನ

By Sathish Kumar KH  |  First Published Apr 12, 2023, 6:31 PM IST

ವಿಧಾನಸಭಾ ಚುನಾವಣೆಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಅಪರಾಥ ಕೃತ್ಯಗಳಲ್ಲಿ ಭಾಗಿಯಾಗಿರುವ ಸುಪಾರಿ ಕಿಲ್ಲರ್‌ ಸೈಫ್‌ ಮತ್ತು ಬೈಂದೂರಿನ ರೌಡಿಶೀಟರ್‌ ರವಿಯನ್ನು ಬಂಧಿಸಲಾಗಿದೆ.


ಉಡುಪಿ (ಏ.12): ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸಮಾಜ ಘಾತುಕ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಇಬ್ಬರು ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಸುಪಾರಿ ಕಿಲ್ಲರ್ ಎಂದು ಕುಖ್ಯಾತನಾಗಿರುವ ಸೈಫುದ್ದೀನ್ ಅಲಿಯಾಸ್ ಸೈಫ್ ಮತ್ತು ರವಿಚಂದ್ರನನ್ನು ಬಂಧಿಸಲಾಗಿದೆ. ಉಡುಪಿ ತಾಲೂಕಿನ ಎ.ಕೆ. ಕಂಪೌಂಡ್‌, ಆತ್ರಾಡಿ ಗ್ರಾಮದ ಸೈಫುದ್ದೀನ್‌ ಅಲಿಯಾಸ್‌ ಸೈಫು, ಹಿರಿಯಡ್ಕ ಹಾಗೂ ಉಡುಪಿ ನಗರ ಠಾಣೆಯಲ್ಲಿ ರೌಡಿ ಹಾಳೆಯನ್ನು ಹೊಂದಿರುತ್ತಾನೆ. ಈತನು 1995 ರಿಂದ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಉಡುಪಿ ಜಿಲ್ಲೆಯ ಉಡುಪಿ ನಗರ, ಹಿರಿಯಡ್ಕ, ಮಣಿಪಾಲ ಮತ್ತು ಕುಂದಾಪುರ ಠಾಣೆಗಳಲ್ಲಿ ಪ್ರಕರಣಗಳಿದ್ದು, ಕೊಲೆ, ಕೊಲೆಯತ್ನ, ಬಲಪ್ರಯೋಗ, ದೊಂಬಿ, ಹಲ್ಲೆ, ವಂಚನೆ ಸಹಿತ 19 ಪ್ರಕರಣಗಳು ದಾಖಲಾಗಿರುತ್ತದೆ. 34 ಜನ ಸಹಚರರ ಬಣವನ್ನು ಹೊಂದಿರುತ್ತಾನೆ.

Latest Videos

undefined

ರಾಜಕಾರಣದಲ್ಲಿ ನಾಲಿಗೆ ಹರಿಬಿಟ್ಟ ನಟಿ ಶೃತಿ ವಿರುದ್ಧ ಕೇಸ್‌ ದಾಖಲು

ಸಮಾಜದ ಸ್ವಾಸ್ಥ್ಯ ಕಾಪಾಡಲು ಬಂಧನ: ತಮ್ಮ ಅಪರಾಧ ಕೃತ್ಯಗಳಿಂದ ಸಮಾಜದ ಸ್ವಾಸ್ಥ್ಯ ಕದಡುವ ವ್ಯಕ್ತಿಗಳಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆ ಇರುವುದರಿಂದ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯವರಿಗೆ ಸಲ್ಲಿಸಿದ ವರದಿಯ ಮೇರೆಗೆ, ಜಿಲ್ಲಾಧಿಕಾರಿಯವರು ಗೂಂಡಾ ಕಾಯ್ದೆಯಂತೆ ಕ್ರಮ ಜರುಗಿಸಿ ಬಂಧನ ಆದೇಶ ಹೊರಡಿಸಿದ್ದು, ಸೈಫುದ್ದೀನ್‌ ಅಲಿಯಾಸ್ ಸೈಫು ಎಂಬಾತನನ್ನು ಕೇಂದ್ರ ಕಾರಾಗೃಹ ಬೆಳಗಾವಿಯಲ್ಲಿ ಬಂಧನದಲ್ಲಿ ಇಡಲಾಗಿದೆ.

ಬೈಂದೂರಿನ ರವಿಯೂ ಜೈಲು ಪಾಲು:  ಬೈಂದೂರು ತಾಲೂಕಿನ ನಂದನವನ ಗ್ರಾಮದ, ರವಿ ಅಲಿಯಾಸ್‌ ರವಿಚಂದ್ರ, ಬೈಂದೂರು ಹಾಗೂ ಹಿರಿಯಡ್ಕ ಠಾಣೆಯಲ್ಲಿ ರೌಡಿಹಾಳೆಯನ್ನು ಹೊಂದಿರುತ್ತಾನೆ. ಈತನು 1996 ರಿಂದ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಹಿರಿಯಡ್ಕ ಠಾಣೆಗಳಲ್ಲಿ ಅಪರಾಧ ಕೃತ್ಯ ಎಸಗಿದ್ದಾನೆ. ಜೊತೆಗೆ ದಕ್ಷಿಣ ಕನ್ನಡ, ಕಾರವಾರ ಹಾಗೂ ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿಯೂ ಸಹ ಪ್ರಕರಣ ದಾಖಲಾಗಿರುತ್ತದೆ.  ಹಲ್ಲೆ, ದೊಂಬಿ, ಸುಲಿಗೆ, ಕೊಲೆಗೆ ಪ್ರಯತ್ನ, ಅಪಹರಣ, ಬಲಧ್ಘೃಹಣ, ಕೋಮು ಗಲಭೆ ಸಹಿತ 21 ಪ್ರಕರಣಗಳು ದಾಖಲಾಗಿರುತ್ತದೆ. ಈತನು 65 ಜನ ಸಹಚರರ ಬಣವನ್ನು ಹೊಂದಿರುತ್ತಾನೆ. ರವಿಚಂದ್ರ ಎಂಬಾತನ್ನು ಕೇಂದ್ರ ಕಾರಾಗೃಹ ಕಲಬುರಗಿಯಲ್ಲಿ ಬಂಧನದಲ್ಲಿ ಇಡಲಾಗಿದೆ.

ಚುನಾವಣೆ ಹಿನ್ನೆಲೆ: ರೌಡಿ ಸೈಲೆಂಟ್‌ ಸುನೀಲ್‌ನಿಗೆ ಪೊಲೀಸರ ಖಡಕ್‌ ಎಚ್ಚರಿಕೆ

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!