
ನವದೆಹಲಿ(ಜು. 31) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ಕೇಸ್ ದಾಖಲಿಸಿದ್ದು ಮತ್ತೊಂದು ತಿರುವು ಪಡೆದುಕೊಂಡಿದೆ.
ನಾಪತ್ತೆಯಾಗಿದ್ದ ರಿಯಾ ಚಕ್ರವರ್ತಿ ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದಿದ್ದಾರೆ. ನಟಿ ರಿಯಾ ಚಕ್ರವರ್ತಿ ಮತ್ತು ಇತರರು ತನ್ನ ಮಗನ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬಿಹಾರ ಪೊಲೀಸರು ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ಅಧಿಕಾರಿಗಳು ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ್ದಾರೆ.
ನಾಪತ್ತೆಯಾಗಿದ್ದ ರಿಯಾ ಪ್ರತ್ಯಕ್ಷಳಾಗಿ ಕೊಟ್ಟ ಶಾಕಿಂಗ್ ಮಾಹಿತಿ
ಸುಶಾಂತ್ ಖಾತೆಯಿಂದ 15 ಕೋಟಿ ರೂ. ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂಬುದು ಪ್ರಮುಖ ಆರೋಪ. ಇದೇ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.
ತನ್ನ ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೃಷ್ಣ ಕುಮಾರ್ ಸಿಂಗ್ ಅವರು ನಟಿ ರಿಯಾ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಇತರ ಆರು ಜನರ ವಿರುದ್ಧ ದೂರು ನೀಡಿದ್ದರು. ಸುಶಾಂತ್ ಸಾವಿನ ತನಿಖೆ ನಡೆಯುತ್ತಲೇ ಇದ್ದು ನಿರ್ದೇಶಕ ಬನ್ಸಾಲಿ, ಮಹೇಶ್ ಭಟ್ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದುಕೊಳ್ಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ