
ಔರಾದ್(ಸೆ.21): ಪಟ್ಟಣದ ಹೃದಯ ಭಾಗದಲ್ಲಿರುವ ಅಮರೇಶ್ವರ ಮಂದಿರದ ಹಿಂಭಾಗದ ರುದ್ರಭೂಮಿಯಲ್ಲಿ ಬಟ್ಟೆ ವ್ಯಾಪಾರಿಯ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ತಾಲೂಕಿನ ಬೋರಾಳ ಗ್ರಾಮದ ಬಾಬುರಾವ ಪಾಂಡ್ರೆ (54) ಮೃತ ವ್ಯಕ್ತಿ. ತನ್ನ ಬಟ್ಟೆ ಅಂಗಡಿಯಲ್ಲಿ ತಂಗುತಿದ್ದ ಬೆಳಿಗ್ಗೆ ಅಂಗಡಿಯ ಸ್ವಲ್ಪ ದೂರದಲ್ಲಿ ಮೃತ ವ್ಯಕ್ತಿಯ ಗುಪ್ತಾಂಗ, ಕೈ ಬೆರಳು, ಮೂಗು ಕತ್ತರಿಸಿರುವ ರೀತಿಯಲ್ಲಿ ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರಸಿಂಗ್ ಠಾಕೂರ್ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹನ್ನು ಬೀದರ್‌ನ ಬ್ರೀಮ್ಸ್ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ವರದಕ್ಷಿಣೆ ಕಿರುಕುಳ: ಮದುವೆಯಾಗಿ ನಾಲ್ಕೇ ತಿಂಗಳಿಗೆ ಮಸಣ ಸೇರಿದ ಯುವತಿ!
ಈ ವೇಳೆ ಎಎಸ್ಪಿ ಮಹೇಶ ಮೇಘಣ್ಣನವರ್ ಮೃತದೇಹವನ್ನು ಪರಿಶೀಲಿಸಿದರು. ಸಾವಿನ ಬಗ್ಗೆ ಎಲ್ಲ ರೀತಿಯಿಂದ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದಾರೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ