
ಚಿತ್ರದುರ್ಗ (ಅ.15): ರಾಜ್ಯ ಸರ್ಕಾರದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಭಾರೀ ವಿವಾದಕ್ಕೆ ಗುರಿಯಾಗಿರುವುದಲ್ಲದೆ ,ಸಮೀಕ್ಷೆ ಕರ್ತವ್ಯದಲ್ಲಿರುವ ಶಿಕ್ಷಕರ ಸಾವು, ಅಪಘಾತ ಪ್ರಕರಣಗಳು ಹೆಚ್ಚಿರುವುದು ಆಘಾತ ಮೂಡಿಸಿದೆ.
ಸಮೀಕ್ಷೆ ಪ್ರಾರಂಭದಲ್ಲಿಂದಲೂ ಹೃದಯಾಘಾತ, ಅಪಘಾತ, ನಾಯಿ ದಾಳಿ, ಸೂಪರ್‌ವೈಸರ್‌ಗಳ ಕಿರುಕುಳದಂತೆ ಶಿಕ್ಷಕರು ಹೈರಾಣಾಗಿದ್ದರೆ, ಕೆಲವರು ಜೀವ ಕಳೆದುಕೊಂಡಿದ್ದಾರೆ. ಈ ನಡುವೆ ಚಿತ್ರದುರ್ಗದಲ್ಲಿ ಜಾತಿಗಣತಿಗೆ ತೆರಳಿದ್ದ ಸಿಬ್ಬಂದಿ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ: ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ
ಚಿತ್ರದುರ್ಗ ಜಿಲ್ಲೆಯಲ್ಲಿ ಜಾತಿಗಣತಿ ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಭೀಕರ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮ ಬಳಿ ನಡೆದಿದೆ. ಈ ಅಪಘಾತದಲ್ಲಿ ಶಿಕ್ಷಕ ಹೇಮಂತ್ ರಾಜು, ಪ್ರವೀಣ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಲ್ಲಸಂದ್ರ ಗ್ರಾಮದಲ್ಲಿ ಜಾತಿ ಗಣತಿ ಕಾರ್ಯ ಮುಗಿಸಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ