
ಬೆಂಗಳೂರು(ಸೆ.20): ಟೆಂಪೋ ಡ್ರೈವರ್ ಮೇಲೆ ನಾಲ್ಕೈದು ಜನರು ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಿ ಸ್ಥಳದಿಂದ ಪರಾರಿಯಾದ ಘಟನೆ ಬೆಂಗಳೂರಿನ ಮಲ್ಲೇಶ್ವರಂನ ಎಂಡಿ ಬ್ಲಾಕ್ 4ನೇ ಕ್ರಾಸ್‌ನಲ್ಲಿ ನಡೆದಿದೆ.
ಟೆಂಪೋ ಡ್ರೈವರ್ ಜಾವೀದ್ ಪಾಷ (38) ಹಲ್ಲೆಗೊಳಗಾದವ. ಶನಿವಾರ ರಾತ್ರಿ 8:30ರ ಸುಮಾರಿಗೆ ಅಟ್ಯಾಕ್ ಮಾಡಿರೋ ದುಷ್ಕರ್ಮಿಗಳು. ಹಳೆ ದ್ವೇಷದ ಹಿನ್ನೆಲೆ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ.
ಟೀ ಕುಡಿಯುತ್ತಿದ್ದ ವೇಳೆ ಮಚ್ಚಿನೇಟು:
ಶ್ರೀರಾಂಪುರ ನಿವಾಸಿಯಾದ ಜಾವೀದ್, ಎಂಡಿ ಬ್ಲಾಕ್‌ನ ಮಸೀದಿಯಲ್ಲಿ ನಮಾಜ್ ಮಾಡಿ, ಪಕ್ಕದ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ಈ ದಾಳಿ ನಡೆದಿದೆ. ದುಷ್ಕರ್ಮಿಗಳು ಜಾವೀದ್‌ನ ಮೇಲೆ ಮಚ್ಚಿನಿಂದ ದಾಳಿ ಮಾಡಿ, ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಜಾವೀದ್ ಪಾಷ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರಿಂದ ಸ್ಥಳ ಪರಿಶೀಲನೆ:
ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ದಾಳಿಯ ಹಿಂದೆ ಹಳೆಯ ದ್ವೇಷವೇ ಕಾರಣವಿರಬಹುದೆಂದು ಶಂಕಿಸಿದ್ದಾರೆ. ದಾಳಿಕೋರರನ್ನು ಗುರುತಿಸಿ ಬಂಧಿಸಲು ಮಲ್ಲೇಶ್ವರಂ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ