ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚನ್ನಪಟ್ಟಣದ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಚನ್ನಪಟ್ಟಣ (ಫೆ.17): ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚನ್ನಪಟ್ಟಣದ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಟಿಟಿ ವಾಹನ ಡಿಕ್ಕಿಯಾಗಿವೆ. ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟಿಟಿಯಲ್ಲಿದ್ದವರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದರು ಎನ್ನಲಾಗಿದೆ. ಕುಟುಂಬ ಸಮೇತ ವಾಪಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ. ಸದ್ಯ ಆರು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು: ನೈಸ್ ರೋಡ್ ಬ್ರಿಡ್ಜ್ ಮೇಲಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಟ್ರಕ್!