ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; ಫ್ರೀಡಂ ಪಾರ್ಕ್‌ ಪ್ರತಿಭಟನೆಗೆ ತೆರಳುತ್ತಿದ್ದ ನ್ಯಾಯಬೆಲೆ ಅಂಗಡಿ ಮಾಲೀಕರು ಸಾವು!

By Ravi Janekal  |  First Published Nov 9, 2023, 12:10 PM IST

ಇಂದು ಬೆಳ್ಳಂಬೆಳಗ್ಗೆ ರಸ್ತೆಯ ಬದಿ ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ.


ತುಮಕೂರು (ನ.9): ಇಂದು ಬೆಳ್ಳಂಬೆಳಗ್ಗೆ ರಸ್ತೆಯ ಬದಿ ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ.

ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು. ಇನ್ನೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರಿಬ್ಬರು ಗಂಗಾವತಿ ಮೂಲದವರು ಎನ್ನಲಾಗಿದೆ. 

Tap to resize

Latest Videos

ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ಮೃತರು. ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ, ಕಮಿಷನ್‌ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದರು. ಈ ವೇಳೆ ಕೋರ ಸಮೀಪ ಕ್ರೂಸರ್‌ ಕಾರಿನ ಹಿಂಬದಿಯ ಟೈಯರ್‌ ಪಂಚ್ಚರ್‌ ಆಗಿದೆ. ಹೀಗಾಗಿ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದು ಡಿಕ್ಕಿಯಾಗಿರುವ ಲಾರಿ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಇಬ್ಬರು.

ಕೆಇಎ ಪರೀಕ್ಷಾ ಅಕ್ರಮ: ಅಕ್ರಮಕ್ಕೆಂದೇ ಹೊಸ ಮೊಬೈಲ್‌ ಖರೀದಿ, ಸಿಮ್‌ ಕಾರ್ಡ್‌ ಹಾಕದೆ ವೈಫೈ ಬಳಕೆ

ಅಪಘಾತ ನಡೆಯುತ್ತಿದ್ದಂತೆ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!