ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, 10ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗ (ಮೇ 11): ರಾಜ್ಯದಲ್ಲಿ ಗುರುವಾರ ಬೆಳಗ್ಗೆಯಿಂದ ಹಲವು ಅಪಘಾತಗಳು ಸಂಭವಿಸಿದ್ದು, ಇಂದು ಸಂಜೆ ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, 10ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಶ್ರೀನಿವಾಸ ಮತ್ತು ಲಕ್ಷ್ಮಿ ಹೆಸರಿನ ಖಾಸಗಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದೆ. ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಸಾವನಪ್ಪಿದ ಸಾಧ್ಯತೆಯಿದೆ. 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೋರಡಿ ಸಮೀಪದ ಕುಮದ್ವತಿ ನದಿಯ ಸೇತುವೆ ಮೇಲೆ ನಡೆದ ಅಪಘಾತ ಸಂಭವಿಸಿದ್ದು, ಅಪಘಾತವಾದ ರಭಸಕ್ಕೆ ಇಡೀ ಬಸ್‌ಗಳ ಅರ್ಧ ಭಾಗವೇ ಸಂಪೂರ್ಣ ನಜ್ಜುಗುಜ್ಜಾಗಿವೆ. ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
Bengaluru Accident: ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್: ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಮಹಿಳೆ
ಜೆಸಿಬಿಯಿಂದ ಬಸ್ ತೆರವುಗೊಳಿಸಿ ಪ್ರಯಾಣಿಕರ ರಕ್ಷಣೆ: ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಹಾಗೂ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್‌ಗಳ ನಡುವೆ ಡಿಕ್ಕಿಯಾಗಿದೆ. ಪ್ರಯಾಣಿಕರ ಪೈಕಿ ಹಲವರು ಮೃತಪಟ್ಟಿರುವುದಾಗಿ ಶಂಕಿಸಲಾಗುತ್ತಿದೆ. ಆದರೆ, ಸದ್ಯಕ್ಕೆ 10 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತಿದ್ದು, ಎಷ್ಟು ಜನ ಎಂದು ಖಚಿತವಾಗಿ ತಿಳಿದುಬಂದಿಲ್ಲ. ಇನ್ನು ಹಲವು ಪ್ರಯಾಣಿಕರು ಬಸ್‌ನಲ್ಲಿಯೇ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಹೊರಗೆ ತೆಗೆಯುವ ಪ್ರಯತ್ನ ನಡೆಯುತ್ತಿದೆ. ಜೆಸಿಬಿ ಮೂಲಕ ಬಸ್‌ಗಳನ್ನು ಸರಿಸುವ ಪ್ರಯತ್ನ ನಡೆದಿದೆ.
10 ಆಂಬ್ಯುಲೆನ್ಸ್‌ಗಳಲ್ಲಿ ಗಾಯಾಳುಗಳ ರವಾನೆ: ಮೆಗ್ಗಾನ್ ಆಸ್ಪತ್ರೆಗೆ ದಾಖಲು ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್‌ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಆದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಅಪಘಾತದಿಂದಾಗಿ ಶಿವಮೊಗ್ಗ – ಸಾಗರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಎರಡು ಬದಿಯಲ್ಲಿ ಸುಮಾರು ಎರಡು ಕಿ.ಮೀ.ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಕುಂಸಿ ಮತ್ತು ಶಿವಮೊಗ್ಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ.
Karnataka Election 2023: ಯಾದಗಿರಿಯ ಕೆಂಭಾವಿ, ಸುರಪುರದಲ್ಲಿ ಸೆಕ್ಷನ್ 144 ಜಾರಿ
ಸಂಸದ ಬಿವೈ ರಾಘವೇಂದ್ರ ಭೇಟಿ:
ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿ 70ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ದಾಖಲಿಸಲಾಗಿದೆ. ಗಾಯಾಳುಗಳನ್ನು ದಾಖಲಿಸಿದ ಮೆಗ್ಗಾನ್ ಆಸ್ಪತ್ರೆಗೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ, ವಿಜಯೇಂದ್ರ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಗಾಯಗಳ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ. ಶ್ರೀಧರ್ ನೇತೃತ್ವದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಚಾಲಕ ಸೇರಿ ಹಲವರ ಸಾವು: ಶಿಕಾರಿಪುರದಿಂದ ಶಿವಮೊಗ್ಗದೆಡೆಗೆ ಸಾಗುತ್ತಿದ್ದ ಶ್ರೀನಿವಾಸ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ಸಾಗುತ್ತಿದ್ದ ಬಾಲಾಜಿ ಬಸ್ ನಡುವೆ ಅಪಘಾತವಾಗಿದ್ದು, ಸ್ಥಳದಲ್ಲೇ ಬಸ್ ಚಾಲಕ ಕಾಳಪ್ಪ ಸಾವನ್ನಪ್ಪಿದ್ದಾರೆ. ಬಾಲಾಜಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಇನ್ನೂ ಹಲವರು ಸಾವನ್ನಪ್ಪಿದ್ದು, ಅವರ ಮಾಹಿತಿ ಲಭ್ಯವಾಗಿಲ್ಲ. ಎರಡೂ ಬಸ್ ಗಳಲ್ಲಿ ಸೇರಿ ಒಟ್ಟು 75-80 ಜನ ಪ್ರಯಾಣಿಕರು ಸಂಚಾರ ಮಾಡುತ್ತಿದ್ದು, ಗಾಯಾಳುಗಳ ಸಂಖ್ಯೆಯೂ 70ಕ್ಕೂ ಅಧಿಕವಾಗಿದೆ ಎಮದು ತಿಳಿದುಬಂದಿದೆ.
ಕಾರಿಗೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್- ಇಬ್ಬರು ಸ್ಪಾಟ್ ಡೆತ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕಾರು ಹಾಗೂ ಟೆಂಪೋ ಟ್ರಾವೆಲ್ಲರ್ (ಟಿಟಿ) ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಈ ಭೀಕರ ಅಪಘಾತ ನಡೆದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.