
ಬೆಂಗಳೂರು (ಫೆ.24): ನೈಸ್ ರಸ್ತೆಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಲಾರಿಯೊಂದು ಉರುಳಿ ಬಿದ್ದ ಪರಿಣಾಮ ಚಾಲಕನ ಕಾಲಿನ ಪಾದ ತುಂಡಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಲಾರಿ ಚಾಲಕ ಮುಕ್ಮುಲ್ ಕಾಲು ತುಂಡಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನೈಸ್ ರಸ್ತೆಯ ಮಂಗನಹಳ್ಳಿ ಬಳಿ ಗುರುವಾರ ತಡರಾತ್ರಿ ಈ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು, ಎರಡು ಲಾರಿ ಸೇರಿದಂತೆ ನಾಲ್ಕೈದು ವಾಹನಗಳಿಗೆ ಹಾನಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಜನತೆಗೆ ಗುಡ್‌ನ್ಯೂಸ್ ಕೊಟ್ಟ ಬಿಎಂಆರ್‌ಸಿಎಲ್: ಮೆಜೆಸ್ಟಿಕ್‌ನಿಂದ ಬೆಳಗ್ಗೆ 5ಕ್ಕೆ ಮೆಟ್ರೋ ಸೇವೆ ಆರಂಭ
ನೈಸ್ ರಸ್ತೆಯಲ್ಲಿ ಲಾರಿಯೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಖಾಸಗಿ ಕಂಪನಿಯ ಹಾಲಿನ ಉತ್ಪನ್ನಗಳನ್ನು ಮುಕ್ಮುಲ್ ಲಾರಿಯಲ್ಲಿ ಸಾಗಿಸುತ್ತಿದ್ದರು. ಈ ವೇಳೆ ಲಾರಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಮುಕ್ಮುಲ್ ಕಾಲಿನ ಪಾದ ತುಂಡಾಗಿದೆ. ಕೂಡಲೇ ಸ್ಥಳೀಯರು ಗಾಯಾಳುವಿನ ನೆರವಿಗೆ ಧಾವಿಸಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ಸರಣಿ ಅಪಘಾತದಿಂದ ನೈಸ್ ರಸ್ತೆಯಲ್ಲಿ ಕೆಲ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು, ಕ್ರೇನ್ ಸಹಾಯದಿಂದ ಲಾರಿಯನ್ನು ತೆರವುಗೊಳಿಸಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ