ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಮೈಸೂರಿಗೆ ಹೊರಟಿದ್ದವರು ಮಸಣಕ್ಕೆ!

By Ravi Janekal  |  First Published Jun 4, 2023, 10:04 AM IST

ಲಾರಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ ತಿರುಮಲಪುರ ಗೇಟ್ ಬಳಿ ನಡೆದಿದೆ.


ಮಂಡ್ಯ (ಜೂ.4) : ಲಾರಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ ತಿರುಮಲಪುರ ಗೇಟ್ ಬಳಿ ನಡೆದಿದೆ.

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಹೇಮಂತ್, ಶರತ್, ನವೀನ್ ಮೃತಪಟ್ಟಿರುವ ದುರ್ದೈವಿಗಳು. ಮೃತರೆಲ್ಲರೂ ನೆಲಮಂಗಲ ಮೂಲದವರು ಎನ್ನುವ ಮಾಹಿತಿ ಲಭ್ಯವಾಗಿದೆ.

Tap to resize

Latest Videos

ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದ ಲಾರಿ. ಹಿಂಬದಿಯಲ್ಲಿ ಕಾರು ಕೂಡ ಮೈಸೂರಿಗೆ ಹೊರಟಿತ್ತು. ವೇಗವಾಗಿ ಹಿಂದೆ ಹೋಗುತ್ತಿದ್ದ ವೇಳೆ ನಡೆದಿರುವ ದುರಂತ. ಬೆಳಗಿನ ಜಾವ 5 ಗಂಟೆ ಸಮಯದಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡು ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೇಗವಾಗಿ ಚಲಿಸುತ್ತಿದ್ದರಿಂದ ಡಿಕ್ಕಿ ಹೊಡೆದ ರಭಸಕ್ಕೆ ನುಜ್ಜುಗುಜ್ಜಾಗಿ ಪಕ್ಕದಲ್ಲಿನ ಹಳ್ಳಕ್ಕೆ ಬಿದ್ದಿದ್ದ ಕಾರು. ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಎಸ್ಕೇಪ್ ಆಗಿರುವ ಲಾರಿ ಚಾಲಕ. ಸ್ಥಳಕ್ಕೆ ಪೊಲೀಸರು ಭೇಟಿ, ಸ್ಥಳ ಪರಿಶೀಲನೆ.

ಒಡಿಶಾ ರೈಲು ದುರಂತ: ಸುರಕ್ಷಿತವಾಗಿ ಬೆಂಗ್ಳೂರಿಗೆ ಬಂದಿಳಿದ ರಾಜ್ಯದ ವಾಲಿಬಾಲ್ ಆಟಗಾರರು 

ಅಪಘಾತ: ಬೈಕ್‌ ಹಿಂಬದಿ ಸವಾರ ಸಾವು

ಕಲಾದಗಿ: ಬೆಳಗಾವಿ ರಾಯಚೂರು ರಾಜ್ಯ ಹೆದ್ದಾರಿ ರಸ್ತೆ ಮುರುನಾಳ ಆರ್‌ಸಿ ಬಳಿ ರಸ್ತೆಯಲ್ಲಿ ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ ಹೊಡೆದು ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮುಧೋಳ ತಾಲೂಕಿನ ಚತ್ರಭಾನುಕೋಟಿಯ ಮುಂಜುನಾಥ ಕಾಳವ್ವ ಮಾದರ (26) ಮೃತ ವ್ಯಕ್ತಿ. ಚತ್ರಭಾನುಕೋಟೆಯಿಂದ ಬಾಗಲಕೋಟೆ ಕಡೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಲ್ಲಿಸಿದ ಬೈಕ್‌ಗೆ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಹಿಂಬದಿ ಕುಳಿತ್ತಿದ್ದ ವ್ಯಕ್ತಿ ಗಂಭಿರ ಗಾಯಗೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕಲಾದಗಿ ಪೊಲೀಸ್‌ ಠಾಣೆ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

click me!