ಹಳೇ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕುಣಿಗಲ್-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕ್ಲೀನರ್ ಆಗಿ ತಲೆಮರೆಸಿಕೊಂಡಿದ್ದ ರೌಡಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಂಪಿಗೆಹಳ್ಳಿಯ ಮಂಜುನಾಥ ಅಲಿಯಾಸ್ ಓ.ಸಿ.ಮಂಜ ಬಂಧಿತ ಆರೋಪಿ.
ಬೆಂಗಳೂರು (ಡಿ.16): ಹಳೇ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕುಣಿಗಲ್-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕ್ಲೀನರ್ ಆಗಿ ತಲೆಮರೆಸಿಕೊಂಡಿದ್ದ ರೌಡಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಂಪಿಗೆಹಳ್ಳಿಯ ಮಂಜುನಾಥ ಅಲಿಯಾಸ್ ಓ.ಸಿ.ಮಂಜ ಬಂಧಿತನಾಗಿದ್ದು, ಈತನ ಮೇಲೆ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ರೌಡಿಯ ಪತ್ತೆಗಿಳಿದ ಇನ್‌ಸ್ಪೆಕ್ಟರ್ ಬಾಲಾಜಿ ನೇತೃತ್ವದ ತಂಡವು, ಕೊನೆಗೆ ಕುಣಿಗಲ್-ಮಾಗಡಿ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಕ್ಲೀನರ್ ಆಗಿದ್ದ ಓಸಿ ಮಂಜನನ್ನು ಪತ್ತೆ ಹಚ್ಚಿದೆ.
undefined
ನಗರದೊಳಗೆ ಎಂಟ್ರಿ ಕೊಟ್ಟ ಜಿಂಕೆ ಅಪಘಾತಕ್ಕೆ ಬಲಿ; ಸಂಸದ ತೇಜಸ್ವಿ ಸೂರ್ಯ ಭೇಟಿ ಮಾಡಿದ ಗ್ರೀನ್ ಆರ್ಮಿ ಫೋರ್ಸ್ ತಂಡ
ಹಲವು ವರ್ಷಗಳಿಂದ ಕಾನೂನು-ಬಾಹಿರ ಚಟುವಟಿಕೆಗಳಲ್ಲಿ ಮಂಜ ನಿರತನಾಗಿದ್ದು, ಆತನ ಮೇಲೆ ಕೊಲೆ, ಕೊಲೆ ಯತ್ನ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಪುಂಡಾಟಿಕೆ ಮಾಡಿದ ಆರೋಪದಡಿ ಆರು ಪ್ರಕರಣಗಳು ದಾಖಲಾಗಿವೆ. ಈ ಕ್ರಿಮಿನಲ್ ಚರಿತ್ರೆ ಹಿನ್ನೆಲೆಯಲ್ಲಿ ಆತನ ಮೇಲೆ ಸಂಪಿಗೆಹಳ್ಳಿ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು. ಆರು ತಿಂಗಳ ಹಿಂದೆ ಕೊಲೆ ಪ್ರಕರಣದಲ್ಲಿ ಜಾಮೀನು ಹೊರಬಂದ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಮಂಜ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಂಡೀಪುರ ಕಾಡಂಚಿನಲ್ಲಿ ಕುರಿಗಾಹಿಯನ್ನು ಎಳೆದೊಯ್ದು ತಿಂದು ಹಾಕಿದ ಹುಲಿ!