Belagavi: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರ ಹತ್ಯೆ: ಕೊಲೆಯ ರಹಸ್ಯ ಬಯಲು

By Govindaraj S  |  First Published Jul 8, 2023, 8:19 AM IST

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು ಜುಲೈ 6ರಿಂದ ನಾಪತ್ತೆಯಾಗಿದ್ದರು. 


ಬೆಳಗಾವಿ (ಜು.08): ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು ಜುಲೈ 6ರಿಂದ ನಾಪತ್ತೆಯಾಗಿದ್ದರು. ಹೀಗಿರುವಾಗ ಆಶ್ರಮಕ್ಕೆ ಬಂದಿದ್ದ ಭಕ್ತರು ಅವರಿಗಾಗಿ ಸುತ್ತಮುತ್ತ ಶೋಧ ನಡೆಸಿದ್ದರು. 

ಅದರೀಗ ಅವರ ಹತ್ಯೆ ನಡೆದಿರುವುದು ಖಚಿತವಾಗಿದೆ. ಹೌದು ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಜೈನಮುನಿಗಳು ನಾಪತ್ತೆಯಾಗಿದ್ದಾರೆಂದು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚಿಕ್ಕೋಡಿ ಪೊಲೀಸರು‌ ತನಿಖೆ ಕೈಗೊಂಡಿದ್ದರು.  ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಅದರೆ ತನಿಖೆಯ ವೇಳೆ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ ರಹಸ್ಯ ಬಯಲಾಗಿದೆ. ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಶವಕ್ಕಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. 

Latest Videos

undefined

ಅಭಿವೃದ್ಧಿ, ಸಾಮಾಜಿಕ ನ್ಯಾಯದ ಬಜೆಟ್‌: ಸಚಿವ ಜಮೀರ್‌ ಅಹಮದ್‌ ಬಣ್ಣನೆ

ಅತ್ತ ಆರೋಪಿಗಳೂ ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದ್ದೇವೆ ಎಂದರೆ, ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎನ್ನುತ್ತಿದ್ದಾರೆ. ಹೀಗಿರುವಾಗ ಪೊಲೀಸರು ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ 6.30 ರಿಂದ ಜೈನಮುನಿ ಕಾಮಕುಮಾರನಂದಿ ಮೃತದೇಹದ ಶೋಧಕಾರ್ಯ ಮುಂದುವರೆಸಲಿದ್ದಾರೆ. ಇನ್ನು ತಾವು ಆಶ್ರಮದಿಂದಲೇ ಸ್ವಾಮೀಜಿಯನ್ನ ಅಪಹರಿಸಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.

ಆಶ್ರಮದಲ್ಲಿ ನೀರವಮೌನ: ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ನೀರವಮೌನ ಆವರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಹಿರೇಕೋಡಿ ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಜುಲೈ 5ರ ರಾತ್ರಿ 10 ಗಂಟೆಯವರೆಗೆ ಆಶ್ರಮದ ತಮ್ಮ ಕೋಣೆಯಲ್ಲಿಯೇ ಇದ್ದ ಜೈನಮುನಿ, ಜುಲೈ 6ರ ಬೆಳಗ್ಗೆ ಅಡುಗೆ ಮಾಡುವವಳು ಆಶ್ರಮಕ್ಕೆ ಬಂದಾಗ ಜೈನಮುನಿ ಕೋಣೆಯಲ್ಲಿ ಇರಲಿಲ್ಲ. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು. ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದರು. 

ಪದವೀಧರರು, ಡಿಪ್ಲೊಮೊದಾರರಿಗೆ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’ ಜಾರಿ: ಸಿದ್ದರಾಮಯ್ಯ

ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ನಾಪತ್ತೆಯಾದ ಬಗ್ಗೆ ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು, ಅನುಮಾನ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಜೈನಮುನಿಗಳ ಹತ್ಯೆ ಮಾಡಿದ್ದಾಗಿ ಬಾಯ್ಬಿಟ್ಟಿದ್ದ ಆರೋಪಿಗಳು, ಕೊಲೆ ಮಾಡಿ ಶವ ಎಲ್ಲಿ ಬೀಸಾಡಿದ್ದೇವೆ ಎಂಬುದನ್ನುಆರೋಪಿಗಳು ಸ್ಪಷ್ಟವಾಗಿ ತಿಳಿಸಿರಲಿಲ್ಲ. ಇನ್ನು ಸ್ಥಳದಲ್ಲೇ ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಮೊಕ್ಕಾಂ ಹೂಡಿದ್ದಾರೆ.

click me!