ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಕಾರು ಚಾಲಕನೊಬ್ಬ ಆತ್ಮಹತ್ಯೆ ಮಾಡಿರುವ ಘಟನೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಮದನ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಬೆಂಗಳೂರು (ನ.13) : ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಕಾರು ಚಾಲಕನೊಬ್ಬ ಆತ್ಮಹತ್ಯೆ ಮಾಡಿರುವ ಘಟನೆ ರಾಜರಾಜೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ಮದನ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶನಿವಾರ ರಾತ್ರಿ 9.30ರ ಸುಮಾರಿಗೆ ರಾಜರಾಜೇಶ್ವರಿನಗರದ ಹಲಗೆವಡೇರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.
undefined
ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಮದನ್ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಡಿ ಕಾರು ಚಾಲಕನಾಗಿ ಕೆಲಸ ಮಾಡಿದ್ದ. ಬಳಿಕ ಆ ಕೆಲಸ ಬಿಟ್ಟು ರಾಜರಾಜೇಶ್ವರಿನಗರದಲ್ಲಿ ವ್ಯಕ್ತಿಯೊಬ್ಬರ ಬಳಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹಲಗೆವಡೇರಹಳ್ಳಿಯ ಸ್ನೇಹಿತ ತೇಜು ಎಂಬಾತನ ರೂಮ್‌ನಲ್ಲಿ ಉಳಿದುಕೊಳ್ಳುತ್ತಿದ್ದ. ಶನಿವಾರ ರಾತ್ರಿ ರೂಮ್‌ನಲ್ಲಿ ಇದ್ದ ಮದನ್, ಏಕಾಏಕಿ ನಾಲ್ಕನೇ ಅಂಸ್ತಿನಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡೆತ್‌ನೋಟ್ ಬರೆದಿಟ್ಟು ಬ್ರಹ್ಮಕುಮಾರಿ ಆಶ್ರಮದಲ್ಲಿ ಸಾವಿಗೆ ಶರಣಾದ ಸೋದರಿಯರು
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯಾವುದೇ ಮರಣ ಪತ್ರ ಸದ್ಯಕ್ಕೆ ಸಿಕ್ಕಿಲ್ಲ. ಕೆಲ ದಿನಗಳಿಂದ ಮದನ್ ಮಂಕಾಗಿದ್ದ. ಜೀವನದಲ್ಲಿ ಜಿಗುಪ್ಸೆಗೊಂಡವನಂತೆ ಮಾತನಾಡುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ. ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.