ಬಂಟ್ವಾಳ: ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿಯಾದ ಖದೀಮರು!

Published : Nov 05, 2024, 09:40 AM IST
ಬಂಟ್ವಾಳ: ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿಯಾದ ಖದೀಮರು!

ಸಾರಾಂಶ

ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವು ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ 2.30 ಲಕ್ಷ ನಗದು ಎಗರಿಸಿದ್ದಾರೆ ಕಳ್ಳರು. 

ಬಂಟ್ವಾಳ(ನ.05):  ದೇವಸ್ಥಾನದ ಬಾಗಿಲು ಮುರಿದ ಖದೀಮರು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಇಂದು(ಮಂಗಳವಾರ) ನಡೆದಿದೆ. ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಕಳ್ಳತನ ನಡೆದಿದೆ. 

ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವು ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ 2.30 ಲಕ್ಷ ನಗದು ಎಗರಿಸಿದ್ದಾರೆ ಕಳ್ಳರು. 

ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗ್ಳೂರಿಗೆ ಬಂದು ಕಾರು ಕಳ್ಳತನ: ಹೈಟೆಕ್‌ ಕಳ್ಳ ಅರೆಸ್ಟ್‌

ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಕಂಡುಬಂದಿದೆ.ದೇವಸ್ಥಾನದ ಸುತ್ತಲೂ ತಿರುಗಾಡಿ ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ ಕಳ್ಳರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡಿದ್ದಾರೆ. 

ಸ್ಥಳಕ್ಕೆ ನಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!