
ಬೆಂಗಳೂರು(ಮಾ.05): ಪಾನ್‌ಕಾರ್ಡ್ ಅಪ್ಡೇಟ್ ಮಾಡುವಂತೆ ವ್ಯಕ್ತಿಯೊಬ್ಬರ ಮೊಬೈಲ್‌ಗೆ ಲಿಂಕ್ ಕಳುಹಿಸಿರುವ ಸೈಬರ್ ವಂಚಕರು ಆ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ 4.99 ಲಕ್ಷ ಎಗರಿಸಿದ್ದಾರೆ. ಈ ಸಂಬಂಧ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಾಂತಿನಗರ ನಿವಾಸಿ ಗೋಪಾಲ ಶರ್ಮಾ(48) ಹಣ ಕಳೆದುಕೊಂಡವರು. ಇತ್ತೀಚೆಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಗೋಪಾಲ ಅವರ ವಾಟ್ಸಾಪ್‌ಗೆ ‘ನಿಮ್ಮ ಪಾನ್ ಕಾರ್ಡ್ ಅಪ್ಡೇಟ್ ಮಾಡಿ. ಇಲ್ಲವಾದರೆ, ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಲಿದೆ’ ಎಂಬ ಸಂದೇಶ ಬಂದಿದೆ. ಈ ಸಂದೇಶದ ಜತೆಗೆ ಲಿಂಕ್ ಬಂದಿದ್ದು, ಅದರಂತೆ ಗೋಪಾಲ ಅವರು ಲಿಂಕ್ ತೆರೆದು ಅದರಲ್ಲಿ ಪಾನ್ ಕಾರ್ಡ್ ವಿವರಗಳನ್ನು ನಮೂದಿಸಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿ ಗೋಪಾಲ ಅವರ ಐಸಿಐಸಿಐ ಬ್ಯಾಂಕ್ ಖಾತೆಯಿಂದ ಯೆಸ್ ಬ್ಯಾಂಕ್ ಖಾತೆಗೆ ವಿವಿಧ ಹಂತಗಳಲ್ಲಿ .4.99 ಲಕ್ಷವನ್ನು ವರ್ಗಾವಣೆ ಮಾಡಿಕೊಂಡಿದ್ದಾನೆ.
Bengaluru: ಯುಕೆನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ: ನೈಜೀರಿಯಾ ಪ್ರಜೆಯ ಬಂಧನ
ಲಿಂಕ್‌ನಲ್ಲಿ ಪಾನ್ ಕಾರ್ಡ್ ವಿವರ ನಮೂದಿಸಿದ ಬಳಿಕ ಗೋಪಾಲ ಅವರ ಖಾತೆಯಲ್ಲಿ ಹಣ ಕಡಿತವಾಗಿರುವ ಸಂದೇಶ ಬಂದಿದೆ. ಈ ವೇಳೆ ಆಶ್ಚರ್ಯಗೊಂಡ ಗೋಪಾಲ ಅವರು ಅಪರಿಚಿತ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ತಾನು ಸೈಬರ್ ವಂಚಕರ ಮೋಸದ ಜಾಲಕ್ಕೆ ಸಿಲುಕಿರುವುದು ವೇದ್ಯವಾಗಿದೆ. ಬಳಿಕ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ