
ಚಿತ್ರದುರ್ಗ(ಏ.25): ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ಮಾಡಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ಕು ಮಂದಿಯನ್ನ ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಹಿರಿಯೂರು ನಗರದಲ್ಲಿ ನಿನ್ನೆ(ಶನಿವಾರ) ನಡೆದಿದೆ. ಜಗದೀಶ್ ಮಾರುತಿ, ಕಿರಣ್, ರವಿ ಬಂಧಿತ ಆರೋಪಿಗಳಾಗಿದ್ದಾರೆ.
ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪಂದ್ಯದ ವೇಳೆ ಬಂಧಿತ ಅರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಐಪಿಎಲ್ ಬೆಟ್ಟಿಂಗ್ ಆಟಗಾರನ ಬಳಿ ಮಾಹಿತಿ ಕೇಳಿದ್ದ ನರ್ಸ್!
ದಾಳಿ ಮಾಡಿದ ವೇಳೆ ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ನಗದು ಮತ್ತು 10 ಮೊಬೈಲ್ ಫೋನ್‌ಗಳನ್ನ ವಶ ಪಡಿಸಿಕೊಳ್ಳಲಾಗಿದೆ. ಎಸ್.ಪಿ ರಾಧಿಕಾ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ