
ಶಿರಸಿ(ಮಾ.10): ಇಕ್ಕಟ್ಟಾದ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರನ್ನು ಮಾರುಕಟ್ಟೆ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿಗಳನ್ನು ಹಾನಗಲ್ ತಾಲೂಕು ಹೆರೂರಿನ ದಯಾನಂದ ಮುಗಳಕಟ್ಟಿ, ರವಿ ಮುತ್ತಳ್ಳಿ, ಬಸವರಾಜ ಹಿರೇಮಠ ಎಂದು ಗುರುತಿಸಲಾಗಿದೆ. ನಗರದ ಹುಬ್ಬಳ್ಳಿ ರಸ್ತೆ ನಂ. 5 ಶಾಲೆಯ ಬಳಿ ಸಾಗಾಟ ಮಾಡುತ್ತಿದ್ದ ವಾಹನ ತಡೆದು 5 ಜಾನುವಾರು ವಶಕ್ಕೆ ಪಡೆದಿದ್ದಾರೆ.
ಯಲ್ಲಾಪುರ: ಅಕ್ರಮ ಜಾನುವಾರು ಸಾಗಾಟ, ಮೂವರ ಬಂಧನ
ಜಾನುವಾರುಗಳಿಗೆ ಆಹಾರ ನೀರು ನೀಡದೇ ಹಿಂಸಾತ್ಮಕವಾಗಿ ವಧೆ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು. ಯಾವುದೇ ಪರವಾನಗಿ ಮತ್ತು ಜಾನುವಾರು ಕ್ರಯಪತ್ರವಿಲ್ಲದೆ ಅಕ್ರಮವಾಗಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಉನ್ನತ ಅಧಿಕಾರಿಗಳ ಮಾರ್ಗದರ್ಶನದಂತೆ ಡಿಎಸ್ಪಿ ರವಿ ಡಿ. ನಾಯ್ಕ, ಸಿಪಿಐ ಬಿ.ಯು. ಪ್ರದೀಪ್ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ