
ರಬಕವಿ-ಬನಹಟ್ಟಿ(ಮೇ.26): ಅಕ್ರಮವಾಗಿ ಆಕಳು ಮತ್ತು ಕರುಗಳನ್ನು ಸಾಗಿಸುತ್ತಿರುವ ಖಚಿತ ಸುಳಿವಿನ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ ಪೊಲೀಸರು ವಾಹನ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಲ್ಲದೇ 5 ದನಗಳನ್ನು ವಶಕ್ಕೆ ಪಡೆದಿದ್ದಾರೆ.
ಪಿಕ್ ಅಪ್ ವಾಹನದಲ್ಲಿ 5 ದನಗಳನ್ನು ತುಂಬಿಕೊಂಡು ಜಮಖಂಡಿ ಕಡೆಗೆ ಸಾಗಿಸುತ್ತಿರುವ ಮಾಹಿತಿ ಪಡೆದ ಪೊಲೀಸರು ಬನಹಟ್ಟಿ ಸಮೀಪದ ಯಲ್ಲಟ್ಟಿಗ್ರಾಮದ ನಿರುಪಾಧೀಶ್ವರ ಮಠದ ಹತ್ತಿರ ತಪಾಸಣೆ ನಡೆಸುವ ಸಂದರ್ಭ ಮೂವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.
ಗಂಡನ ಬಿಟ್ಟು ಸೋಷಿಯಲ್ ಮೀಡಿಯಾ ಫ್ರೆಂಡ್ ಹಿಂದೆ ಹೋದ ಸುಂದರಿ, ಹೆಣವಾಗಿ ಸಿಕ್ಕಳು!
ಅಥಣಿ ತಾಲೂಕಿನ ಮಸಗುಪ್ಪಿ ಗ್ರಾಮದ ರಾವಸಾಬ ಶಂಕರ ಹಾರುಗೇರಿ, ಮಹಾರಾಷ್ಟ್ರದ ಕವಟೆ ಮಹಾಂಕಾಳ ತಾಲೂಕಿನ ಇಂಗನಗಾಂವ ಗ್ರಾಮದ ಸಾಗರ ಅರವಿಂದ ಲೊಂಡೆ ಹಾಗೂ ಅಶೋಕ ನಾಮದೇವ ಚೌಗಲೆ ಎಂಬುವರೇ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳಾಗಿದ್ದಾರೆ. ಅಕ್ರಮವಾಗಿ ಪರವಾನಿಗೆ ಪಡೆಯದೇ ಮಾಂಸದ ಉದ್ದೇಶಕ್ಕಾಗಿ ಸಾಗಣೆ ಮಾಡುತ್ತಿರುವುÜದಾಗಿ ಪೊಲೀಸರ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ. ಈ ಪ್ರಕರಣದ ಕುರಿತು ಬನಹಟ್ಟಿಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪಿ.ಎಸ್.ಐ. ರಾಘವೇಂದ್ರ ಖೋತ ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ