ಬೆಳಗಟ್ಟೆ ಪಕ್ಕದ ಹಳಿಗೆ ಶವ ಎಸೆಯೋ ವೇಳೆ ನಡೆದ ಘಟನೆ, ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು
ಹಾಸನ(ಅ.12): ವ್ಯಕ್ತಿಯೊಬ್ಬರನ್ನು ಬೇರೆಲ್ಲೋ ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಮೇಲೆ ಎಸೆಯಲು ಬಂದಾಗ ಬೊಲೆರೋ ವಾಹನವೊಂದು ಆಯತಪ್ಪಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಪರಿಣಾಮ ಅದರಲ್ಲಿದ್ದ ಮೂವರು ಆರೋಪಿಗಳು ವಾಹನದೊಳಗೆ ಸಿಲುಕಿ ನಂತರ ಪೊಲೀಸರ ಕೈಗೆ ಸಿಕ್ಕ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಬಳಿಯ ರೈಲ್ವೆ ಹಳಿ ಬಳಿ ಮಂಗಳವಾರ ನಡೆದಿದೆ.
ಕೊಲೆಯಾಗಿರುವ ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಬೊಲೆರೋ ವಾಹನದಲ್ಲಿ ತಂದು ಶಾಂತಿಗ್ರಾಮ ಬಳಿಯ ಬೆಣಗಟ್ಟೆಸಮೀಪದ ರೈಲ್ವೆ ಟ್ರ್ಯಾಕ್‌ನಲ್ಲಿ ಎಸೆಯುವ ವೇಳೆ ವಾಹನ ಪಲ್ಟಿಯಾಗಿದೆ. ಶವದ ಸಮೇತವೇ ರೈಲ್ವೆ ಟ್ರ್ಯಾಕ್ ಮೇಲೆ ಬೊಲೆರೋ ಉರುಳಿಬಿದ್ದಿದ್ದು, ವಾಹನದೊಳಗೆ ಆರೋಪಿಗಳೂ ಸಿಕ್ಕಿಬಿದ್ದಿದ್ದಾರೆ. ಇದನ್ನು ಕಂಡು ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನದಲ್ಲಿ ಸಿಕ್ಕಿಹಾಕಿಕೊಂಡಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಗೋಬಿ ತಿನ್ಲಿಲ್ಲ ಅಂತಾ ಲಟ್ಟಣಿಗೆಯಲ್ಲಿ ಅಜ್ಜಿಗೆ ಕೊಟ್ಟ ಏಟು, 6 ವರ್ಷದ ನಂತ್ರ ಮೊಮ್ಮಗನಿಗೆ ತೆರೆದ ಜೈಲು ಗೇಟು!
ಸಿಕ್ಕಿಬಿದ್ದ ಮೂವರೂ ಆರೋಪಿಗಳು ರಾಷ್ಟ್ರೀಯ ಹೆದ್ದಾರಿ 75ರ ಬಳಿ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದು, ಯಾವ ಕಾರಣಕ್ಕಾಗಿ ಕೊಲೆ ಮಾಡಿ ಇಲ್ಲಿಗೆ ಎಸೆಯಲು ಬಂದಿದ್ದರು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.