ಬೆಂಗಳೂರು: ಟೀ ಕುಡಿಯಲು ಕರೆದು ಗುತ್ತಿಗೆದಾರನ ಹನಿಟ್ರ್ಯಾಪ್, ಹಣ, ಚಿನ್ನಾಭರಣ ಸುಲಿಗೆ!

Published : Dec 28, 2024, 06:56 AM IST
ಬೆಂಗಳೂರು: ಟೀ ಕುಡಿಯಲು ಕರೆದು ಗುತ್ತಿಗೆದಾರನ ಹನಿಟ್ರ್ಯಾಪ್, ಹಣ, ಚಿನ್ನಾಭರಣ ಸುಲಿಗೆ!

ಸಾರಾಂಶ

ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ನಯನಾ ಎಂಬ ಮಹಿಳೆ ಸೇರಿ ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು. 

ಬೆಂಗಳೂರು(ಡಿ.28):  ಸಿವಿಲ್ ಗುತ್ತಿಗೆದಾರನಿಗೆ ಟೀ ಕುಡಿಯಲು ಮನೆಗೆ ಕರೆದು 'ಹನಿಟ್ರ್ಯಾಪ್' ಖೆಡ್ಡಾಕ್ಕೆ ಕೆಡವಿ ಬಳಿಕ ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಂಗಾನಗರದ ಸಂತೋಷ್ (28), ಅಜಯ್ (25) ಮತ್ತು ಜಯರಾಜ್ (30) ಬಂಧಿತರು. 

ಆರೋಪಿಗಳು ಡಿ.9ರಂದು ಮಾಗಡಿ ರಸ್ತೆ ತುಂಗಾನಗರದ ಮನೆಯೊಂದರಲ್ಲಿ ರಂಗನಾಥ (57) ಎಂಬುವವರನ್ನು ಬೆದರಿಸಿ ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ನಯನಾ ಎಂಬ ಮಹಿಳೆ ಸೇರಿ ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇಡ್ಲಿ ಮಾರುತ್ತಿದ್ದ ಮುನಿರತ್ನ, ಹನಿಟ್ರ್ಯಾಪ್ ಮಾಡಿ ಕೋಟ್ಯಾಧಿಪತಿಯಾದ?; ಲಗ್ಗೆರೆ ನಾರಾಯಣಸ್ವಾಮಿ

ಪ್ರಕರಣದ ಹಿನ್ನೆಲೆ: 

ದೂರುದಾರ ರಂಗನಾಥ ಸಿವಿಲ್ ಗುತ್ತಿಗೆದಾರರಾಗಿದ್ದು, ಕಳೆದ 6 ತಿಂಗಳ ಹಿಂದೆ ಶಿವು ಎಂಬ ಸ್ನೇಹಿತನ ಮುಖಾಂತರ ನಯನಾ ಎಂಬ ಮಹಿಳೆಯ ಪರಿಚಯವಾಗಿದೆ. ಬಳಿಕ ಈ ನಯನಾ ತನ್ನ ಮಗುವಿಗೆ ಹುಷಾರಿಲ್ಲ, ಆಸ್ಪತ್ರೆಗೆ ತೋರಿಸಬೇಕು ಎಂದು ರಂಗನಾಥ ಬಳಿ ಫೋನ್ ಪೇ ಮುಖಾಂತರ ಎರಡು ಬಾರಿ 25000 ಮತ್ತು ಮತ್ತೊಮ್ಮೆ ₹4000 ಪಡೆದಿದ್ದಾಳೆ. ಬಳಿಕ ರಂಗನಾಥಗೆ ಕರೆ ಮಾಡಿ ಮನೆಗೆ ಬನ್ನಿ ಎಂದು ಹಲವಾರು ಬಾರಿ ಕರೆದರೂ ಆಕೆಯ ಮನೆಗೆ ಹೋಗಿರಲಿಲ್ಲ. ಈ ನಡುವೆ ರಂಗನಾಥ ಅವರು ನೆಲಗದರನಹಳ್ಳಿಯಲ್ಲಿ ಇರುವ ಅಳಿಯನ ಮನೆ ನವೀಕ ರಣ ಕೆಲಸ ಕೈಗೆತ್ತಿಕೊಂಡಿದ್ದರಿಂದ ಡಿ.9ರಂದು ಬೆಳಗ್ಗೆ ಮಾಗಡಿ ರಸ್ತೆಯ ತುಂಗಾನಗರದ ಮಾರ್ಗವಾಗಿ ನೆಲಗದರನಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗಿದ್ದರು. 

ಬಟ್ಟೆ ಬಚ್ಚಿಸಿ ಫೋಟೋ ಸೆರೆ: 

ತುಂಗಾನಗರ ಕ್ರಾಸ್ ಬಳಿ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬಂದ ನಯನಾ, ನಮ್ಮ ಮನೆ ಇಲ್ಲೇ ಹತ್ತಿರದಲ್ಲಿದ್ದು ಟೀ ಕುಡಿದು ಹೋಗಿ ಎಂದು ರಂಗನಾಥ್ ಅವರನ್ನು ಆಹ್ವಾನಿಸಿದ್ದಳು. ಇದಕ್ಕೆ ಒಪ್ಪಿದ ರಂಗನಾಥ ಆಕೆಯ ಮನೆಗೆ ತೆರಳಿ ಮಾತುಕತೆಯಲ್ಲಿ ತೊಡಗಿದ್ದಾರೆ. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ ಮೂವರು ಅಪರಿಚಿತರು ತಮ್ಮನ್ನು ಕ್ರೈಂ ಪೊಲೀಸ ರೆಂದು ನಂಬಿಸಿದ್ದು, ನೀವು ಮನೆಯಲ್ಲಿ ವ್ಯಭಿಚಾರ ಮಾಡುತ್ತಿದ್ದೀರಾ? ಎಂದು ರಂಗನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ರಂಗನಾಥ್‌ನ ಬಟ್ಟೆ ಬಚ್ಚಿಸಿ ಮೊಬೈಲ್‌ನಲ್ಲಿ ಫೋಟೋತೆಗೆದಿದ್ದಾರೆ. 82 ಲಕ್ಷ ಕೊಟ್ಟರೆ ಇಲ್ಲೇ ಬಿಟ್ಟು ಹೋಗುತ್ತೇವೆ. ಇಲ್ಲವಾದರೆ, ನೀನು ಇವಳೊಂದಿಗೆ ಅಕ್ರಮ ಸಂಬಂಧ ಹೊಂದಿರುವೆ ಎಂದು ನಿನ್ನ ಹೆಂಡತಿ ಮತ್ತು ಮಕ್ಕಳಿಗೆ ತಿಳಿಸುತ್ತೇವೆ ಎಂದು ಹೆದರಿಸಿದ್ದಾರೆ. 

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಮಾಜಿ ಸಚಿವರಿಗೆ ಹನಿಟ್ರ್ಯಾಪ್: ₹ 20 ಲಕ್ಷ ಕೇಳಿ ತಗ್ಲಾಕೊಂಡ ಲೇಡಿ!

ಹಣ, ಚಿನ್ನಾಭರಣ ಸುಲಿಗೆ: 

ರಂಗನಾಥ ಅವರ ಕೊರಳಲ್ಲಿದ್ದ ಚಿನ್ನದ ಸರ, ಜೇಬಿನಲ್ಲಿದ್ದ 29 ಸಾವಿರ ರು. ನಗದು ಹಾಗೂ ಮೊಬೈಲ್ ಕಸಿದುಕೊಂಡು ಹೊರಗೆ ಹೋಗಿದ್ದಾರೆ. ಬಳಿಕ ಮತ್ತೊಬ್ಬ ವಾಪಾಸ್ ಬಂದು ರಂಗನಾಥ ಅವರ ಕೈಯಲ್ಲಿದ್ದ ಎರಡು ಚಿನ್ನದ ಉಂಗುರ ಕಿತ್ತುಕೊಂಡಿದ್ದಾನೆ. ಬಳಿಕ ಮತ್ತೊಬ್ಬ ಮೊಬೈಲ್ ಫೋನ್ ಪೇ ಮುಖಾಂತರ 26 ಸಾವಿರ ರು. ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅಪರಿಚಿತರು ಆಟೋ ಹತ್ತಿ ಪರಾರಿಯಾಗಿದ್ದಾರೆ.

ದೂರು ಕೊಟ್ಟರೆ ಮಗನ ಜತೆ ನಿನ್ನ ಮನೆಗೆ ಬರುವೆ ಎಂದು ಮಹಿಳೆಯ ಬೆದರಿಕೆ! 

ಅಪರಿಚಿತರು ಪರಾರಿಯಾದ ಆಟೋವನ್ನು ನಯನಾ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ್ದಾಳೆ. ಕೆಲ ಹೊತ್ತಿನ ಬಳಿಕ ರಂಗನಾಥ್ ಮೊಬೈಲ್‌ಗೆ ನಯನಾ ಕರೆ ಮಾಡಿದಾಗ, ಘಟನೆ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡೋಣ ಬಾ ಎಂದು ರಂಗನಾಥ್ ಕರೆದಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ, ನನ್ನ ಮಗುವನ್ನು ನಿನ್ನ ಮನೆಗೆ ಕರೆತಂದು ನನಗೂ ನಿನಗೂ ಸಂಬಂಧವಿದೆ ಎಂದು ಹೇಳುವುದಾಗಿ ನಯನಾ ಹೆದರಿಸಿದ್ದಾಳೆ. ಇದರಿಂದ ಭಯಗೊಂಡ ರಂಗನಾಥ ಮನೆಗೆ ತೆರಳಿದ್ದಾರೆ. ಬಳಿಕ ವಕೀಲರೊಂದಿಗೆ ಚರ್ಚಿಸಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?