ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವೀಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಹೂವಿನಹಳ್ಳಿ ಬಳಿ ನಡೆದಿದೆ.
ಕಲಬುರಗಿ (ಜು.16): ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವೀಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಹೂವಿನಹಳ್ಳಿ ಬಳಿ ನಡೆದಿದೆ. ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ 35 ವರ್ಷದ ಜಗನ್ನಾಥ್ ಚಕ್ಕುಲಿ, ಅದೇ ಗ್ರಾಮದ 45 ವರ್ಷದ ಮೇಹಬೂಬ್ ಅಲಿ ಹಾಗೂ ಚಿಂಚೋಳಿ ತಾಲ್ಲೂಕಿನ ಶಾದಿಪೂರ ಗ್ರಾಮದ 30 ವರ್ಷದ ಶ್ರೀಕಾಂತ್ ಮೃತ ದುರ್ದೈವಿಗಳು. ಘಟನೆಯಲ್ಲಿ ಅಮರ ಎಂಬುವನಿಗೆ ಗಂಭಿರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಮುಖಂಡನ ಕೊಂದ ಹಂತಕನ ಮೇಲೆ ಪೊಲೀಸ್ ಫೈರಿಂಗ್
ಕದ್ದ ಬೈಕ್‌ನಲ್ಲಿ ಅಪಘಾತ ಎಸಗಿ ಪರಾರಿಯಾದ ಕಳ್ಳ: ಚಾಲಾಕಿ ಚೋರನೊಬ್ಬ ಹಾಡಹಗಲೇ ದ್ವಿಚಕ್ರ ವಾಹನ ಕದ್ದು ಪರಾರಿಯಾಗುವಾಗ ಅಪಘಾತ ಎಸಗಿ ಸ್ಥಳದಲ್ಲೇ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗಿರುವ ಘಟನೆ ಬುಧವಾರ ಜಯನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಯನಗರ 5ನೇ ಬ್ಲಾಕ್‌ನಲ್ಲಿ ಬುಧವಾರ ಬೆಳಗ್ಗೆ 11ರ ಸುಮಾರಿಗೆ ವೀರಣ್ಣ ರಸ್ತೆಯ ಬದಿ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಮಾಡಿ ಕಾರ್ಯ ನಿಮಿತ್ತ ಕಚೇರಿಗೆ ತೆರಳಿದ್ದಾರೆ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಕೀ ಬಿಟ್ಟು ತೆರಳಿದ್ದಾರೆ. ಅರ್ಧ ಗಂಟೆ ಬಳಿಕ ಕೆಲಸ ಮುಗಿಸಿ ದ್ವಿಚಕ್ರ ವಾಹನ ನಿಲುಗಡೆ ಮಾಡಿದ್ದ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಹೋಗಲು ಮುಂದಾಗಿದ್ದಾನೆ. ಈ ವೇಳೆ ವೀರಣ್ಣ ಅವರು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿ ವಿಫಲವಾಗಿದ್ದಾರೆ.
ಭೋವಿ ಶ್ರೀ ಸೇರಿ ಇಬ್ಬರು ಶಾಸಕರಿಗೆ ಕೊಲೆ ಬೆದರಿಕೆ ಸಂದೇಶ
ಚಾಲಾಕಿ ಕಳ್ಳ ವೀರಣ್ಣ ಅವರ ದ್ವಿಚಕ್ರ ವಾಹನ ಕದ್ದು ಪರಾರಿಯಾಗುವಾಗ 24ನೇ ಮುಖ್ಯರಸ್ತೆಯಲ್ಲಿ ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಎರಡೂ ದ್ವಿಚಕ್ರ ವಾಹನಗಳ ಇಬ್ಬರೂ ಸವಾರರು ರಸ್ತೆಗೆ ಬಿದ್ದಿದ್ದಾರೆ. ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಕಾನ್‌ಸ್ಟೇಬಲ್ ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಿ ಚಾಲಾಕಿ ಕಳ್ಳ ಸ್ಥಳದಲ್ಲೇ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗಿದ್ದಾನೆ.