* ಕೆಎಸ್‌ಆರ್‌ಟಿಸಿ ನೌಕರರು ಹಾಗೂ ಪೊಲೀಸರಿಗೆ ಬ್ಲಾಕ್ ಮೇಲ್ ಮಾಡಿದ್ದ ಬಂಧಿತರು
* ಮೂವರ ಮೇಲೆ ಪ್ರಕರಣ ದಾಖಲಿಸಿ ತಹಶೀಲ್ದಾರ್‌ಗೆ ವರದಿ ನೀಡಿದ ಪೊಲೀಸರು
* ನೈತಿಕ ಪೊಲೀಸ್ ಗಿರಿ ಮಾಡುತ್ತಾ ನೌಕರರಿಗೆ ಬೆದರಿಕೆವೊಡ್ಡುತ್ತಿದ್ದ ಆರೋಪಿಗಳು
ದಾವಣಗೆರೆ(ಆ.08): ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದ ಕೆಆರ್‌ಎಸ್ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ಮಾಲತೇಶ್, ಶಶಿಕುಮಾರ್ ಹಾಗೂ ನಿಟ್ಟುವಳ್ಳಿಯ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರು ನೈತಿಕ ಪೊಲೀಸ್ ಗಿರಿ ಮಾಡುತ್ತಾ ನೌಕರರಿಗೆ ಬೆದರಿಕೆವೊಡ್ಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಗಳು ಗಲಭೆಗೆ ಪ್ರಚೋದನೆ ನೀಡುತ್ತಾ ಸಮಾಜದಲ್ಲಿ ಶಾಂತಿ ಭಂಗ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಉಗ್ರ ನಂಟು; NIAಯಿಂದ ಭಟ್ಕಳದಲ್ಲಿ ಮೂವರು ವಶಕ್ಕೆ
ಕೆಎಸ್‌ಆರ್‌ಟಿಸಿ ನೌಕರರು ಹಾಗೂ ಪೊಲೀಸರಿಗೂ ಬ್ಲಾಕ್ ಮೇಲ್ ಮಾಡಿ 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ದಾವಣಗೆರೆ ಕೆಟಿಜೆ ನಗರ ಪೊಲೀಸರು ಮೂವರ ಮೇಲೆ ಪ್ರಕರಣ ದಾಖಲಿಸಿ ತಹಶೀಲ್ದಾರ್‌ಗೆ ವರದಿ ನೀಡಿದ್ದಾರೆ.