
ಗದಗ, (ಸೆ.18): ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಈ ದುರ್ಘಟನೆ ಇಂದು (ಸೆ.18) ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್ ಪ್ರಯಾಣ ಬೆಳೆಸಿದ್ದ ಅಣ್ಣ-ತಂಗಿ ಹಾಗೂ ತಂಗಿ ಮಗು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕೇವಲ 20 ರೂ. ಸಲುವಾಗಿ ಸ್ನೇಹಿತನನ್ನೇ ಬಡಿದು ಕೊಂದರು..!
ಸಾವನ್ನಪ್ಪಿದವರು ಶಿರಹಟ್ಟಿ ತಾಲೂಕಿನ ಕನಕವಾಡ ಗ್ರಾಮದವರೆಂದು ತಿಳಿದುಬಂದಿದೆ. ಮುಂಡರಗಿ ಪಟ್ಟಣದಿಂದ ಶಿರಹಟ್ಟಿ ಪಟ್ಟಣದತ್ತ ಅತೀ ವೇಗವಾಗಿ ಚಲಿಸುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ ಬೈಕ್ ನಲ್ಲಿ ಮುಂಡರಗಿ ಪಟ್ಟಣದತ್ತ ತೆರಳುತ್ತಿದ್ದ ಅಣ್ಣ, ತಂಗಿ ಹಾಗೂ ತಂಗಿಯ ಮಗು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುಂಡರಗಿ ಸಿಪಿಐ ಸುನೀಲ್ ಸವದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ