ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಸಿಬ್ಬಂದಿಯಿಂದ ಮೂವರು ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ!

By Gowthami KFirst Published May 8, 2023, 8:53 PM IST
Highlights

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಸಿಬ್ಬಂದಿಯಿಂದ ಬಾಲಕರ ಮೇಲೆ ಹಲ್ಲೆ  ನಡೆದಿರುವ ಅಮಾನುಷ ಘಟನೆ ನಡೆದಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಈ   ಘಟನೆ ನಡೆದಿದೆ.

ಹುಬ್ಬಳ್ಳಿ (ಮೇ.8): ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಸಿಬ್ಬಂದಿಯಿಂದ ಬಾಲಕರ ಮೇಲೆ ಹಲ್ಲೆ  ನಡೆದಿರುವ ಅಮಾನುಷ ಘಟನೆ ನಡೆದಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಈ   ಘಟನೆ ನಡೆದಿದ್ದು, ಹಳೆ ಹುಬ್ಬಳ್ಳಿ ಠಾಣೆಯ ಎಎಸ್ಐ ಪರಶುರಾಮ್ ಚಲುವಾದಿ ಮತ್ತು ಆತನ ಸಹೋದರನಿಂದ ಈ  ಕೃತ್ಯ ನಡೆದಿರುವ ಆರೋಪ ಕೇಳಿಬಂದಿದೆ. ತಮ್ಮ ಪೊಲೀಸ್ ಠಾಣೆ ವ್ಯಾಪ್ತಿಗೆ ಬಾರದೇ ಇದ್ದರೂ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮೂವರು ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಹಲ್ಲೆ ನಡೆಸಲಾಗಿದ್ದು, ಮೂವರು ಬಾಲಕರು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಸಿಬ್ಬಂದಿ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಿದ್ದಾರೆನ್ನಲಾಗಿದೆ.

ಚುನಾವಣೆ ಸಂದರ್ಭದಲ್ಲೇ ಮಾಜಿ‌ ಶಾಸಕನ ಮನೆ ಭರ್ಜರಿ ದರೋಡೆ, ಬಂದೂಕು ಮಚ್ಚು ಹಿಡಿದು ಬೆದರಿಕೆ!

ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಬೈಕ್‌ ಡಿಕ್ಕಿ; ಸವಾರ ಸಾವು
ಬೆಂಗಳೂರು: ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ರಸ್ತೆಯ ಸುಮ್ಮನಹಳ್ಳಿ ನಿವಾಸಿ ಪ್ರವೀಣ(22) ಮೃತ ಸವಾರ. ಖಾಸಗಿ ಕಂಪನಿ ಉದ್ಯೋಗಿ ಪ್ರವೀಣ ಶನಿವಾರ ಕೆಲಸ ಮುಗಿಸಿಕೊಂಡು ರಾತ್ರಿ 11.45ರ ಸುಮಾರಿಗೆ ಮನೆಗೆ ಬರುವಾಗ ಮಾರ್ಗ ಮಧ್ಯೆ ಎಫ್‌ಡಿಐ ವೃತ್ತದ ಬಳಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಪ್ರವೀಣ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಪ್ರವೀಣ ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಬೈಕ್‌ ಸವಾರ ವೇಗದ ಚಾಲನೆ ಹಾಗೂ ಕ್ಯಾಂಟರ್‌ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಲು ಮಾರುವ ವ್ಯಕ್ತಿಯಿಂದ 7 ವರ್ಷದ ಬಾಲಕಿಯ ಮೇಲೆ ರೇಪ್‌!

ರೋಡ್‌ಶೋದಲ್ಲಿ ಹಲ್ಲೆ: ರಾಜಿಯಲ್ಲಿ ಇತ್ಯರ್ಥ
ಉಳ್ಳಾಲ: ಮಂಗಳೂರು ಕ್ಷೇತ್ರದ ನಾಟೆಕಲ್‌ ಬಳಿ ಭಾನುವಾರ ಎಸ್‌ಡಿಪಿಐ ರ್‍ಯಾಲಿ ಸಂದರ್ಭ ಕಾಂಗ್ರೆಸ್‌ ಪ್ರಚಾರದ ವಾಹನದಲ್ಲಿ ಹಾಡನ್ನು ಹಾಕಿರುವುದನ್ನು ಆಕ್ಷೇಪಿಸಿದ ಎಸ್‌ಡಿಪಿಐ ಕಾರ್ಯಕರ್ತರು ಚಾಲಕನಿಗೆ ಹಲ್ಲೆ ನಡೆಸಿದ್ದ ಪ್ರಕರಣ ಕೊಣಾಜೆ ಠಾಣೆಯಲ್ಲಿ ರಾಜಿಯಲ್ಲಿ ಇತ್ಯರ್ಥಗೊಂಡಿದೆ. ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಎಸ್‌ಡಿಪಿಐ ಕಾರ್ಯಕರ್ತನನ್ನು ಬಿಡುಗಡೆಗೊಳಿಸಿದ್ದಾರೆ. ಕಾಂಗ್ರೆಸ್‌ ಚಾಲಕ ನೌಫಾಲ್‌ ಎಂಬವರಿಗೆ ಎಸ್‌ಡಿಪಿಐ ಕಾರ್ಯಕರ್ತರು ನಾಟೆಕಲ್‌ ಸಮೀಪ ಹಲ್ಲೆ ನಡೆಸಿರುವುದನ್ನು ಖಂಡಿಸಿ, ದೇರಳಕಟ್ಟೆಸಮೀಪ ಕಾಂಗ್ರೆಸ್‌ ಕಾರ್ಯಕರ್ತರು ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಸಂಶಯ ವ್ಯಕ್ತಪಡಿಸಿದ ಎಸ್‌ಡಿಪಿಐ ಕಾರ್ಯಕರ್ತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದರು. ತಡರಾತ್ರಿ 2 ಗಂಟೆಯವರೆಗೆ ಎರಡೂ ಪಕ್ಷಗಳ ಮುಖಂಡರು ಮಾತುಕತೆ ನಡೆಸಿ, ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ತೀರ್ಮಾನಿಸಿದ್ದರು. ನಂತರ ಬಂಧಿತ ಕಾರ್ಯಕರ್ತನನ್ನು ಬಿಡುಗಡೆಗೊಳಿಸಲಾಗಿದೆ.

click me!