* ತುಮಕೂರು ಜಿಲ್ಲೆಯ ಜಿಲ್ಲೆಯ ಗುಬ್ಬಿ ತಾಲೂಕಿನ ಇಡಕನಹಳ್ಳಿಯಲ್ಲಿ ನಡೆದ ಘಟನೆ
* ಮಗಳ ಸಂಸಾರದಲ್ಲಿ ಏನಾದರೂ ನಡೆದಿತ್ತಾ?
* ಮದುವೆಯಾದ ಬಳಿಕ ಪತಿಯಿಂದ ದೂರ ಉಳಿದಿದ್ದ ಮಗಳು ಶುಭಾ
ತುಮಕೂರು(ಡಿ.17): ಮಗಳ ಸಾಂಸಾರಿಕ ಜೀವನದ ಸಮಸ್ಯೆಗೆ ಜಿಲ್ಲೆಯ ಹೇಮಾವತಿ ನಾಲಾ ವಿಭಾಗದ ಎಇಇ ರಮೇಶ್ ಕುಟುಂಬ ಬಲಿಯಾಯ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ರಮೇಶ್, ಪತ್ನಿ ಹಾಗೂ ಮಗಳು ಶುಭಾ ಅವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಇಡಕನಹಳ್ಳಿಯಲ್ಲಿ ಇಂದು(ಶುಕ್ರವಾರ) ನಡೆದಿದೆ. ನಿನ್ನೆಯಷ್ಟೇ ಪತ್ನಿ ಮಗಳು ಸಮೇತ ಕೆಲಸಕ್ಕೆ ಹಾಜರಾಗಿದ್ದ ರಮೇಶ್ ಅವರು ಇಂದು ಶವವಾಗಿ ಪತ್ತೆಯಾಗಿದ್ದಾರೆ. ಹೇಮಾವತಿ ನಾಲೆಗೆ ಹಾರಿ ರಮೇಶ್, ಪತ್ನಿ ಹಾಗೂ ಮಗಳು ಶುಭಾ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೊನೆಗೂ ಪತ್ತೆಯಾದ ರಮೇಶ್ ಮೃತ ದೇಹ
ಇಡಕನಹಳ್ಳಿ ಬಳಿಯ ಹೇಮಾವತಿ ನಾಲೆಯಲ್ಲಿ ರಮೇಶ್ ಮೃತದೇಹ(Deadbody) ಸಿಕ್ಕಿದೆ. ನಿನ್ನೆ(ಗುರುವಾರಓ) ಸಂಜೆಯಿಂದ ರಮೇಶ್ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಮದುವೆಯಾದ(Marriage) ಒಂದೇ ವಾರದಲ್ಲಿ ಶುಭಾ ಗಂಡನೊಂದಿಗೆ ಜಗಳವಾಡಿಕೊಂಡು ತವರು ಮನೆಗೆ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಹುಡಗನೊಂದಿಗೆ ಶುಭಾ ವಿವಾಹವಾಗಿತ್ತು. ಹೊಸದಾಗಿ ಮದುವೆಯಾದ ಬಳಿಕ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಇದೀಗ ಭಾರೀ ಚರ್ಚೆ ನಡೆಯುತ್ತಿದೆ. ಮಗಳ ಸಂಸಾರದಲ್ಲಿ ಏನಾದರೂ ನಡೆದಿತ್ತಾ?. ಮದುವೆಯಾದ ಬಳಿಕ ಪತಿಯಿಂದ ಶುಭಾ ದೂರ ಉಳಿದಿದ್ದಯ ಯಾಕೆ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಏತನ್ಮಧ್ಯೆ ಒಂದೇ ಇವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾಗಳಿಗೆ ಎಡೆಮಾಡಿಕೊಟ್ಟಿದೆ.
Lover Commit Suicide: ಪ್ರೇಮಿ ಸಾವಿವ ಸುಳ್ಳು ಸುದ್ದಿಗೆ ಪ್ರೇಯಸಿ ಬಲಿ..!
ತುಮಕೂರು(Tumakuru) ಜಿಲ್ಲೆಯ ತಿಪಟೂರು(Tiptur) ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ಬಳಿಯಿರುವ ಹೇಮಾವತಿ ನಾಲಾ ವಿಭಾಗದ ಎಇಇ ಆಗಿ ಮೃತ ರಮೇಶ್ ಅವರು ಕೆಲಸ ಮಾಡ್ತಿದ್ದರು. ಆತ್ಮಹತ್ಯೆಗೆ ಶರಣಾದ ಈ ಕುಟುಂಬ ತುಮಕೂರಿನ ಮರಳೂರಿನಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಗುಬ್ಬಿ ಸಿಪಿಐ ನಧಾಪ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.
ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಹ ಘಟನೆ ದಾವಣಗೆರೆ ನಗರದ ಭಾರತ್ ಕಾಲೋನಿಯಲ್ಲಿ ಸೆ.20 ರಂದು ನಡೆದಿತ್ತು. ಕೃಷ್ಣ ನಾಯಕ(35) ಲಾರಿ ಚಾಲಕ, ಪತ್ನಿ ಸುಮಾ (30), ಮಗು ಧೃವ (6) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಪತ್ನಿಯ ಅನಾರೋಗ್ಯದಿಂದ ಕುಟುಂಬ ಬೇಸತ್ತಿತ್ತು ಎಂದು ಹೇಳಲಾಗುತ್ತಿದೆ.
Religious Conversion in Mangalore: ಮತಾಂತರ ಭೀತಿಯಿಂದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ!
ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ನಿರಂತರ ಅಲೆದಾಡುತ್ತಿತ್ತು ಈ ಕುಟುಂಬ. ಆಸ್ಪತ್ರೆ ಖರ್ಚು ವೆಚ್ಚಕ್ಕೆ ಹೆದರಿದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಹಾಗೂ ಮಗುವಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಆರ್‌ಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು.
ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!
ಸ್ಥಳೀಯ ಪತ್ರಿಕೆ ಸಂಪಾದಕ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ಸೆ. 18 ರಂದು ನಡೆದಿತ್ತು. ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30), ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಮಗಳು ಸಿಂಧೂರಾಣಿ ಗಂಡನ ಮನೆಗೆ ಹೋಗದಿದ್ದಕ್ಕೆ ಬೇಸರಗೊಂಡಿದ್ದ ಶಂಕರ್, ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಹೋಗಿದ್ದರು. ಮನೆಗೆ ವಾಪಸ್ಸಾಗಿದ್ದಾರೆ. ಮನೆ ಬೀಗ ಹಾಕಿದ್ದನ್ನು ಗಮನಿಸಿ ಸ್ನೇಹಿತರ ಮನೆಗೆ ಹೋಗಿದ್ದಾರೆ. ಮನೆಯವರಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ರಿಸೀವ್ ಮಾಡದೇ ಇದ್ದಾಗ ಮನೆಗೆ ಬಂದು ಕಿಟಕಿ ಗಾಜು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿತ್ತು.