ಬೂದಿಗೊಪ್ಪ ಕ್ರಾಸ್ ಬಳಿ ಭೀಕರ ಅಪಘಾತ, ಕುಡುಚಿ ಠಾಣೆ ASI ಪತ್ನಿ, ಪುತ್ರಿ ಸೇರಿ ಮೂವರ ಸಾವು!

By Suvarna NewsFirst Published Sep 25, 2022, 3:25 PM IST
Highlights

ಬೂದಿಗೊಪ್ಪ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ASI ಪತ್ನಿ, ಪುತ್ರಿ ಸೇರಿದಂತೆ ಮೂವರು ಸ್ಥಳದಲ್ಲೆ ನಿಧನರಾಗಿದ್ದಾರೆ. ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ.

ಬೆಳಗಾವಿ(ಸೆ.25):  ಕರ್ನಾಟಕದಲ್ಲಿ ಇತ್ತೀಚೆಗೆ ಅಪಘಾತ ಹಾಗೂ ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಸರಣಿ ಅಪಘಾತ ಸಂಭವಿಸಿದೆ. ಕಾರು, ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಕುಡಚಿ ಪೊಲೀಸ್ ಠಾಣೆಯ ಎಎಸ್ಐ ವೈ.ಎಂ.ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ ನಿಧನರಾಗಿದ್ದಾರೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಪೊಲೀಸ್ ಎಎಸ್ಐ ಕುಟುಂಬ ಈ ಅಪಘಾತದಲ್ಲಿ ಸ್ಥಳದಲ್ಲೇ ನಿಧನರಾಗಿದ್ದಾರೆ. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಇದೀಗ ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ್ ಪಾಟೀಲ್ ದಾವಿಸಿದ್ದಾರೆ. ಇನ್ನು ಅಪಘಾತದ ಸುದ್ದಿಯಿಂದ ಆಘಾತಕ್ಕೊಳಗಾಗಿರುವ ಎಎಸ್ಐ ವೈ.ಎಂ.ಹಲಕಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಎಎಸ್ಐ ವೈ.ಎಂ.ಹಲಕಿ ಕುಟುಂಬ ಯರಗಟ್ಟಿಯತ್ತ ತೆರಳುತ್ತಿತ್ತು. ಈ ವೇಳೆ  ಬೆಳಗಾವಿ ಕಡೆಗೆ ಬರುತ್ತಿದ್ದ ಸೀಮೆಂಟ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್ ಕೂಡ ಅಪಘಾತಕ್ಕೀಡಾಗಿದೆ. ಬೈಕ್ ಹಾಗೂ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.  ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಅಜ್ಜಿ ನಿಧನರಾಗಿದ್ದಾರೆ.  ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು.

Chikkaballapura; ರಾಷ್ಟ್ರೀಯ ಹೆದ್ದಾರಿಯಲ್ಲಿದೆ ಡೇಂಜರ್ ಆಕ್ಸಿಡೆಂಟ್ ಸ್ಟಾಟ್

ಎಎಸ್ಐ ಹಲಕಿ ಪತ್ನಿ , ಪುತ್ರಿ ಹಾಗೂ ಕಾರು ಚಾಲಕ ನಿಧನರಾಗಿದ್ದರೆ, ಇದೇ ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಕಾರು ಅಪಘಾತ ಕಾಂಗ್ರೆಸ್‌ ಮುಖಂಡ ದೇವೇಂದ್ರಪ್ಪ ಗಾಯ
ಕಾರು ಅಪಘಾತದಲ್ಲಿ ಕಾಂಗ್ರೆಸ್‌ ಮುಖಂಡ ಚಿಕ್ಕಮ್ಮನಹಟ್ಟಿದೇವೇಂದ್ರಪ್ಪ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಸಂಜೆ ತಾಲೂಕಿನ ವ್ಯಾಸಗೊಂಡನಹಳ್ಳಿ ಸಮೀಪ ನಡೆದಿದೆ. ದಾವಣಗೆರೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಗಳೂರಿಗೆ ಬರುವ ವೇಳೆ ತಾಲೂಕಿನ ಮೆದಗಿನಕೆರೆ ಹಾಗೂ ವ್ಯಾಸಗೊಂಡನಹಳ್ಳಿ ಮಧ್ಯೆ ಗೂಡ್‌್ಸವಾಹನ ಹಾಗೂ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಮುಂಭಾಗದಲ್ಲಿದ್ದ ದೇವೇಂದ್ರಪ್ಪಗೆ ತಲೆಗೆ ಗಾಯವಾಗಿದೆ. ಕೂಡಲೇ ಬೇರೊಂದು ಕಾರಿನಲ್ಲಿ ಜಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟಗಾಯಗಳಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಗೂಡ್‌್ಸ ವಾಹನ ಚಾಲಕ ಸಣ್ಣಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಸಂಬಂಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರು ಬಂದು ಗುದ್ದಿದರೂ ಹೊಡೆದಾಟ ಮುಂದುವರೆಸಿದ ವಿದ್ಯಾರ್ಥಿಗಳು : ವಿಡಿಯೋ ವೈರಲ್

ಭಟ್ಕಳದಲ್ಲಿ ಕಾರು ಅಪಘಾತ
ಕುಂದಾಪುರ ಕಡೆಯಿಂದ ಭಟ್ಕಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಢಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಸಾವನ್ನಿಪ್ಪಿದ್ದು, ಮೂವರು ಗಾಯಗೊಂಡ ಘಟನೆ ಮೂಡಭಟ್ಕಳ ಬೈಪಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ಭಟ್ಕಳದ ಉನೈಜ್‌ ಹಮ್ಜದ್‌ ಖತೀಬ್‌ (20) ಮೃತ ಚಾಲಕ. ಮುಹಮ್ಮದ್‌ ಫುರ್ಖಾನ್‌, ಮುಹಮ್ಮದ್‌ ಸುಹೇಲ್‌, ಅಬ್ದುಲ್‌ ರೆಹಮಾನ್‌ ಎಂದು ಗಾಯಾಳುಗಳು. ಇವರು ಸ್ಥಳೀಯ ಖಾಸಗಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು. ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!