ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಿವಿಧೆಡೆ ಸಾಲ ಪಡೆದಿದ್ದ ಶ್ರೀನಿವಾಸ್ ಸಾಲವನ್ನು ಮರುಪಾವತಿಸಲಾಗದೆ ಪರಿತಪಿಸುತ್ತಿದ್ದರು. ಕಳೆದ ಮಂಗಳವಾರದಿಂದ ಕಾಣೆಯಾಗಿದ್ದ ಈ ಮೂವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಅವರ ಸುಳಿವು ದೊರೆಯದಿದ್ದಾಗ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದರು.
ಚನ್ನರಾಯಪಟ್ಟಣ(ಆ.16): ಸಾಲಬಾಧೆ ತಾಳಲಾರದೆ ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ಬುಧವಾರ ನಡೆದಿದೆ. ಶ್ರೀನಿವಾಸ್ (43), ಶ್ವೇತಾ (36) ಮತ್ತು ನಾಗಶ್ರೀ (13) ಮೃತ ವ್ಯಕ್ತಿಗಳು.
ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಿವಿಧೆಡೆ ಸಾಲ ಪಡೆದಿದ್ದ ಶ್ರೀನಿವಾಸ್ ಸಾಲವನ್ನು ಮರುಪಾವತಿಸಲಾಗದೆ ಪರಿತಪಿಸುತ್ತಿದ್ದರು. ಕಳೆದ ಮಂಗಳವಾರದಿಂದ ಕಾಣೆಯಾಗಿದ್ದ ಈ ಮೂವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಅವರ ಸುಳಿವು ದೊರೆಯದಿದ್ದಾಗ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದರು.
ರಾಮನಗರ: ಪ್ರೀತಿಗೆ ಪೋಷಕರ ವಿರೋಧ, ಯುವಕ ನೇಣಿಗೆ ಶರಣು, ಚಾಕು ಇರಿದುಕೊಂಡ ಯುವತಿ
ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ದಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು 2 ಶವ ಹೊರ ತೆಗೆದಿದ್ದಾರೆ. ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.