ರಸ್ತೆ ಖಾಲಿಯಿದೆ ಎಂದು ಬೈಕ್‌ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರು, (ಜೂನ್.21): ಬೈಕ್‌ನಲ್ಲಿ ಸ್ಟಂಟ್ ಮಾಡಲು ಹೋಗಿ ಮೂವರು ಯುವಕರು ಮೃತಪಟ್ಟ ಘಟನೆ ನಗರದ ಬಳ್ಳಾರಿ ರಸ್ತೆಯಲ್ಲಿರುವ ಜಿಕೆವಿಕೆ ಬಳಿ ಭಾನುವಾರ ನಡೆದಿದೆ.
ಮೃತರನ್ನು ನಾಗವಾರ ಗೋವಿಂದಪುರದ ಮಹ್ಮದ್ ಹದಿ, ಅಹಮದ್ ಖಾನ್ ಹಾಗೂ ಸೈಯದ್ ರಿಯಾಜ್ ಎಂದು ಗುರುತಿಸಲಾಗಿದೆ.
ಬೈಕ್ ವ್ಹೀಲಿಂಗ್‌ಗೆ ಪ್ರಿಯಕನನ್ನು ಹುರಿದುಂಬಿಸಿದ ಪ್ರಿಯತಮೆ: ವಿಡಿಯೋ ವೈರಲ್
ಮೂವರು ಯುವಕರು ವ್ಹೀಲಿಂಗ್ ಮಾಡಲು ಬಂದಿದ್ದರು ಎನ್ನಲಾಗಿದೆ. ವ್ಹೀಲಿಂಗ್ ಮಾಡುತ್ತಿದ್ದ ವೇಳೆಯೇ ಯುವಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೆ ನೀಡಿದ್ದಾರೆ ಎಂದು ಯಲಹಂಕ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ರಸ್ತೆ ಖಾಲಿಯಿದೆ ಎಂದು ಬೈಕ್‌ನಲ್ಲಿ ಹೊರಟ ಯುವಕರು ಹುರುಪಿನಿಂದ ಸ್ಟಂಟ್ ಮಾಡಿದ್ದಾರೆ. ಈ ವೇಳೆ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
#NewsIn100Seconds | ಈ ಕ್ಷಣದ ಪ್ರಮುಖ ಸುದ್ದಿಗಳು