
ಚಿಕ್ಕಮಗಳೂರು (ಜೂ.19):ಭದ್ರಾ ನದಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಮೂವರು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದವರು ಎನ್ನಲಾಗಿದೆ. ಬಕ್ರೀದ್ ಹಬ್ಬದ ಬಳಿಕ ಮೋಜು ಮಸ್ತಿಗೆ ಭದ್ರಾ ನದಿಯ ಬ್ಯಾಕ್ ವಾಟರ್‌ನಲ್ಲಿ ತೆಪ್ಪದಲ್ಲಿ ಹೋಗಿದ್ದ ಮೂವರು ಯುವಕರು. ಈ ವೇಳೆ ನಡುನೀರಿನಲ್ಲಿ ತೆಪ್ಪ ಮುಳುಗಿದೆ. ಯಾವುದೇ ಜೀವ ಸುರಕ್ಷಾ ಉಪಕರಣಗಳಿಲ್ಲದ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಯುವಕರು.
ಸ್ಕೂಟಿ-ಪಿಕಪ್ ವಾಹನ ನಡುವೆ ಭೀಕರ ಅಪಘಾತ; ಮಹಿಳೆ ದುರ್ಮರಣ!
ಘಟನೆ ಬಳಿಕ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳದಲ್ಲಿ ಮೂವರ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ.ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ