
ತಿಪಟೂರು (ಸೆ.20): ಪತಿಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ತನ್ನಿಬ್ಬರು ಮಕ್ಕಳ ಜೊತೆ ನೇಣುಬಿಗಿದುಕೊಂಡು ಜೀವ ಬಿಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಡಪನಕೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ಸರಿತಾ (25), ನಾಲ್ಕು ವರ್ಷದ ಗಂಡು ಮಗು ಹಾಗೂ ಎರಡು ವರ್ಷದ ಹೆಣ್ಣು ಮೃತ ದುರ್ದೈವಿಗಳು.
6 ವರ್ಷಗಳ ಹಿಂದೆ ಅದೇ ಗ್ರಾಮದ ಆಟೋ ಚಾಲಕನಾಗಿದ್ದ ಸಂತೋಷ್ ಎಂಬಾತನನ್ನ ಸರಿತಾ ಮದುವೆಯಾಗಿದ್ದಳು. ಮದುವೆಯಾದಗಿಂದಲೂ ಮೃತಳಿಗೆ ಗಂಡ ಸಂತೋಷ್ ಹಾಗೂ ಸಂತೋಷ್ ತಾಯಿ ದಿನನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
ಮಗಳ ಸಾವಿಗೆ ಗಂಡ, ಅತ್ತೆಯ ಕಿರುಕುಳವೇ ಕಾರಣ:
ಸರಿತಾಳ ಸಾವಿಗೆ ಆಕೆಯ ಗಂಡ ಸಂತೋಷ್ ಹಾಗೂ ತಾಯಿ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಕಳೆದ ಆರು ವರ್ಷಗಳಿಂದಲೂ ಕಿರುಕುಳದಿಂದ ಮನನೊಂದಿದ್ದ ಸರಿತಾ, ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ತಾನು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತವೆ ಎಂಬ ಕಾರಣಕ್ಕೆ ತನ್ನಿಬ್ಬರ ಮಕ್ಕಳೊಂದಿಗೆ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ