ದತ್ತಾತ್ರೇಯನ ದರ್ಶನ ಪಡೆದು ವಾಪಸ್​​ ಆಗ್ತಿದ್ದವರು, ನಿಶ್ಚಿತಾರ್ಥಕ್ಕೆ ಹೊರಟಿದ್ದವರು, ಒಟ್ಟು 9 ಜನ ಮಸಣಕ್ಕೆ

Published : Mar 11, 2022, 09:51 PM IST
ದತ್ತಾತ್ರೇಯನ ದರ್ಶನ ಪಡೆದು ವಾಪಸ್​​ ಆಗ್ತಿದ್ದವರು, ನಿಶ್ಚಿತಾರ್ಥಕ್ಕೆ ಹೊರಟಿದ್ದವರು, ಒಟ್ಟು 9 ಜನ ಮಸಣಕ್ಕೆ

ಸಾರಾಂಶ

ದತ್ತಾತ್ರೇಯನ ದರ್ಶನ ಪಡೆದು ವಾಪಸ್​​ ಆಗ್ತಿದ್ದ ಐವರು ಹಾಗು ನಿಶ್ಚಿತಾರ್ಥಕ್ಕೆ ಹೊರಟಿದವರು ನಾಲ್ವರು ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ಕಲಬುರಗಿ/ಕೊಪ್ಪಳ, (ಮಾ.11):  ಕೊಪ್ಪಳ ಹಾಗೂ ಕಲಬುರಗಿಯಲ್ಲಿ (Koppal And Kalaburagi District)ಸಂಭವಿಸಿದ ಪ್ರತ್ಯೇಕ ರಸ್ತೆ ಅಘಾತದಲ್ಲಿ (Road Accident) ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ಹೌದು... ದತ್ತಾತ್ರೇಯನ ದರ್ಶನ ಪಡೆದು ವಾಪಸ್​​ ಆಗ್ತಿದ್ದ ಐವರು ಹಾಗು ನಿಶ್ಚಿತಾರ್ಥಕ್ಕೆ ಹೊರಟಿದವರು ನಾಲ್ವರು ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ಮರಕ್ಕೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಐವರ ದುರ್ಮರಣ
ಕಲಬುರಗಿ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ. ಜೊತೆಗೆ ಕಾರಿನಲ್ಲಿದ ಇಬ್ಬರು ಮಕ್ಕಳಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕ ಸೇರಿ ಕಾರಿನಲ್ಲಿದ್ದ ಐದು ಜನ ದುರ್ಮರಣ ಹೊಂದಿದ್ದಾರೆ. ಮೃತ ಚಾಲಕನ ಹೆಸರು ಸಕಾರಾಂ ವೀರ್ (54). ಉಳಿದ ನಾಲ್ವರ ಹೆಸರು ತಿಳಿದು ಬರಬೇಕಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಕ್ಕಳನ್ನು ಚಿಕಿತ್ಸೆಗಾಗಿ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಳೂರ್ಗಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಅಫಜಲಪುರದ ಕಡೆಯಿಂದ ಮಹಾರಾಷ್ಟ್ರದ ಕಡೆಗೆ ಹೊರಟಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರು ಅಥವಾ ಟೈರ್ ಪಂಕ್ಚರ್ ಆದ ಕಾರಣದಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ದತ್ತಾತ್ರೇಯನ ದರ್ಶನ ಮಾಡಿಕೊಂಡು ಹಿಂದಿರುಗುವ ವೇಳೆ ಈ ದುರ್ಘಟನೆ ನಡೆದಿದೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಕುರಿತು ಸಿಪಿಐ ಜಗದೇವಪ್ಪ ಪಾಳಾ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ ; ನಾಲ್ವರ ಸಾವು
ಕೊಪ್ಪಳ : ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್​ವೊಂದು ಇದ್ದಕ್ಕಿದ್ದಂತೆ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು, ಆಸ್ಪತ್ರೆಯಲ್ಲಿ ಮತ್ತಿಬ್ಬರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕನಕಗಿರಿ ತಾಲೂಕು ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಅಪಘಾತ ಸಂಭವಿಸಿದೆ. ಕಾರಟಗಿ ಪಟ್ಟಣದ 16ನೇ ವಾರ್ಡಿನ ನಿವಾಸಿಗಳಾದ ಯಮನೂರಪ್ಪ (55) ಮತ್ತು ಅಂಬಮ್ಮ (50) ಸ್ಥಳದಲ್ಲೇ ಮೃತಪಟ್ಟರೆ ದ್ಯಾವಮ್ಮ (60), ಶೇಷಪ್ಪ ಬಂಡಿ (40) ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಕಾರಟಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಇವರು ಕಾರಟಗಿಯಿಂದ ಕನಕಗಿರಿಗೆ ಟ್ರ್ಯಾಕ್ಟರ್​​ನಲ್ಲಿ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು
ಬೀದರ್: ರಾಶಿ ಯಂತ್ರಕ್ಕೆ ಸಿಲುಕಿದ ಪರಿಣಾಮ ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಕುರನಳ್ಳಿ ಗ್ರಾಮದಲ್ಲಿ ನಡೆದಿದೆ.

27 ವರ್ಷದ ಸುವರ್ಣ ಬಾಲಾಜಿ ಚಿಕಲೆ ಎಂಬ ಮಹಿಳೆ ಮೃತ ದುರ್ದೈವಿಯಾಗಿದ್ದು, ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯವೇ ಮಹಿಳೆಯ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

ರಾಶಿ ಬಳಿಕ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿ ಒಮ್ಮೆಲೇ ಗಾಡಿ ಮುಂದಕ್ಕೆ ಚಲಿಸಿದ್ದು ಈ ವೇಳೆ ಸುವರ್ಣಗೆ ವಾಹನ ತಗುಲಿ ರಾಶಿ ಯಂತ್ರದ ಪಾಯಿಂಟ್‍ನಲ್ಲಿ ಸಿಲುಕಿದ್ದಾರೆ.

ಕೂಲಿ ಕೆಲಸಕ್ಕೆ ಬಂದಿದ್ದ ಸುವರ್ಣ ಬಾಲಾಜಿ ಚಿಕಲೆ ಅವರ ಕೂದಲು ಟ್ರ್ಯಾಕ್ಟರ್ ಜಾಯಿಂಟ್‍ಗೆ ಸಿಲುಕಿ ಕುತ್ತಿಗೆಗೆ ಭಾಗಕ್ಕೆ ಗಾಯವಾಗಿ ದೇಹದಿಂದ ರುಂಡ ಬೇರ್ಪಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದೀಗ ಪತಿ ಬಾಲಾಜಿ ನೀಡಿದ ದೂರಿನ ಮೇಲೆ ಜನವಾಡ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!