: ಪ್ರವಾಸಕ್ಕೆ ಬಂದಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 100 ಅಡಿ ಕೆಳಕ್ಕೆ ಉರುಳಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಸಂಭವಿಸಿದೆ.
ಚಿಕ್ಕಮಗಳೂರು (ಏ.28): ಪ್ರವಾಸಕ್ಕೆ ಬಂದಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 100 ಅಡಿ ಕೆಳಕ್ಕೆ ಉರುಳಿಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಮಗು ಮಹಮದ್ ನವಾಜ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಸುಮಾರು 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 6 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸದ್ಯ ಗಾಯಾಳುಗಳು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
undefined
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸ ಬಂದಿದ್ದರು. ಆದರೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಬಸ್ ಚಲಿಸುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡ ಚಾಲಕ. ಇದರಿಂದ ಬಸ್ ಪಲ್ಟಿಯಾಗಿ ನೂರು ಅಡಿ ಕೆಳಕ್ಕೆ ಉರುಳಿಬಿದ್ದಿದೆ.
ಅಪಘಾತವಾಗಿ ಗಂಭೀರ ಸ್ಥಿತಿಯಲ್ಲಿದ್ದವನನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ ನಿಂಬಾಳ್ಕರ್
ರಸ್ತೆ ಅಪಘಾತ ಬೈಕ್ ಸವಾರ ಸಾವು:
ಬೆಂಗಳೂರು: ಬೈಕ್-ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್‌ನಲ್ಲಿ ನಡೆದಿದೆ.
ಮೋಹನ್ (25) ಸಾವಿಗೀಡಾದ ಯುವಕ. 22ರಂದು ಸಂಜೆ 4 ಗಂಟೆ ಸುಮಾರಿಗೆ ನಡೆದಿರುವ ಭೀಕರ ಅಪಘಾತ. ಕಾರು ಬೈಕ್ ಡಿಕ್ಕಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಯಚೂರು: ಹನುಮಂತನಿಗೆ ಪೂಜೆ ಮಾಡುತ್ತಿರುವಾಗಲೇ ಮಿನಿ ಲಾರಿ ಗುದ್ದಿ ಮೂವರು ಹನುಮ ಮಾಲಾಧಾರಿಗಳ ಸಾವು
ಅಡ್ಡ ರಸ್ತೆಯಿಂದ ಪಾಸ್ ಆಗುವ ವೇಳೆ ವೇಗವಾಗಿ ಬಂದು ಗುದ್ದಿದ ಕಾರು. ಕಾರು ಗುದ್ದಿದ ರಭಸಕ್ಕೆ ರಸ್ತೆಗೆ ಹಾರಿ ಬಿದ್ದಿ ಮೋಹನ್. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗೆ ಬ್ರೈನ್ ಡೆಡ್ ಆಗಿ ಮೃತಪಟ್ಟಿದ್ದ ಬೈಕ್ ಸವಾರ ಮೋಹನ್. ಸದ್ಯ ಅಪಘಾತ ಪ್ರಕರಣ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.