
ಹಾಸನ [ಜ.14]: ಸಾಲ ನೀಡದ್ದಕ್ಕೆ ಚಾಲಕನೊಬ್ಬ ಮಾಲೀಕನನ್ನು ಕೊಲೆ ಮಾಡಿರುವ ಘಟನೆ ಅರಸೀಕೆರೆ ತಾಲೂಕಿನ ಜಾವಗಲ್‌ನಲ್ಲಿ ನಡೆದಿದೆ.
ವಡ್ಡರಹಟ್ಟಿಯ ನಾಗೇಶ್ ಸಿದ್ಧಾಬೋವಿ (47) ಕೊಲೆಯಾದ ಮಾಲೀಕ. ಟ್ರ್ಯಾಕ್ಟರ್ ಚಾಲಕ ರಂಗಸ್ವಾಮಿ ಮಾಲೀಕರಾದ ನಾಗೇಶ್ ಬಳಿ 2 ಸಾವಿರ ರು. ಸಾಲ ಕೇಳಿದ್ದನು.
ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಮೊದಲು ಮೃತ ನಾಗೇಶ್, ರಂಗಸ್ವಾಮಿ ಮೇಲೆ ಕೈ ಮಾಡಿದ್ದಾನೆ. ಇದರಿಂದ ಕುಪಿತಗೊಂಡ ರಂಗಸ್ವಾಮಿ ಚೂಪಾದ ಹಾರೆಯಿಂದ ಮಾಲೀಕನ ಪಕ್ಕೆಲುಬಿಗೆ ಚುಚ್ಚಿದ್ದಾನೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ತೀವ್ರವಾಗಿ ಗಾಯಗೊಂಡ ನಾಗೇಶ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅರಸೀಕೆರೆ ತಾಲೂಕು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಂಗಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ