
ಟಿ.ನರಸೀಪುರ (ಅ.31): ಜೋಳ ಒಕ್ಕಣೆ ಮಾಡುವ ಯಂತ್ರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಚಿಟಗಯ್ಯನಕೊಪ್ಪಲು ಬಳಿ ನಡೆದಿದೆ. ತಾಲೂಕಿನ ಸೋಸಲೆ ಹೋಬಳಿಯ ಬೂದಹಳ್ಳಿ ಗ್ರಾಮದ ಪ್ರಕಾಶ್ (19), ಸಂತೋಷ್ (29) ಮತ್ತು ಮರಿಜೋಗಿ (44) ಮೃತಪಟ್ಟವರು. ಇವರು ಬೂದಹಳ್ಳಿ ಗ್ರಾಮದಿಂದ ಕೂಲಿ ಕೆಲಸಕ್ಕಾಗಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲ ಗ್ರಾಮಸ್ಥರು ಮತ್ತು ಮೃತರ ಬಂಧುಗಳು ಸ್ಥಳಕ್ಕೆ ಆಗಮಿಸಿದರು. ಮೃತರ ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತು. ಈ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಆರ್.ಚೇತನ್, ಎಎಸ್ಪಿ ನಂದಿನಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಸಹಕಾರ ಸಂಘಗಳು ರೈತರಿಗೆ ಹತ್ತಿರವಾಗುವ ಕಾರ್ಯ ಮಾಡಬೇಕು: ಸಚಿವ ಬಿ.ಸಿ.ಪಾಟೀಲ್
ಟ್ರ್ಯಾಕ್ಟರ್ ಮಗಚಿ ಬಾಲಕ ಸಾವು: ಹಿಂದಕ್ಕೆ ತೆಗೆಯುವಾಗ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಡದಿಯ ಕಲ್ಲುಗೋಪಹಳ್ಳಿ ಬಂಡೆ ಸಮೀಪ ಭಾನುವಾರ ನಡೆದಿದೆ. ಡಿ.ಮದನ್(16) ಮೃತ ಬಾಲಕ. ಈತ ಬಿಡದಿ ಪುರಸಭೆ 3ನೇ ವಾರ್ಡ್ ವ್ಯಾಪ್ತಿಯ ಕೆಂಚನಕುಪ್ಪೆ ಜನತಾ ಕಾಲೋನಿ ನಿವಾಸಿ ದಾಸಪ್ಪನವರ ಪುತ್ರ. ಬಿಡದಿಯ ಶ್ರೀ ಬಸವೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಬೆಳಿಗ್ಗೆ ಕಲ್ಲುಗೋಪಹಳ್ಳಿ ಬಂಡೆ ಬಳಿಯಿರುವ ನೀರಿನ ಹೊಂಡದಲ್ಲಿ ಟ್ರ್ಯಾಕ್ಟರ್ ತೊಳೆಯುಲು ಚಾಲಕ ಆನಂದ್ ಜೊತೆಯಲ್ಲಿ ಮದನ್ ಹೋಗಿದ್ದನು.
ಈ ವೇಳೆ ನೀರಿನ ಹೊಂಡದ ಬಳಿ ನಿಲ್ಲಿಸಿದ್ದ ಟ್ರಾಕ್ಟರ್ ಅನ್ನು ಹಿಂದಕ್ಕೆ ತೆಗೆಯುವ ಸಂದರ್ಭದಲ್ಲಿ ಬೃಹತ್ ಹಳ್ಳಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ಸಮೇತ ಹಳ್ಳಕ್ಕೆ ಉರುಳಿಬಿದ್ದ ಬಾಲಕ ಮದನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಧಾವಿಸಿದ ಬಿಡದಿ ಸಿಪಿಐ ತಿಮ್ಮೇಗೌಡ ಹಾಗೂ ಸಿಬ್ಬಂದಿ ಬಾಲಕನ ಮೃತ ದೇಹವನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರ ತೆಗೆಸಿ ಮುಂದಿನ ಕ್ರಮ ಕೈಗೊಂಡರು. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ಶಾಸಕ ಎ.ಮಂಜುನಾಥ್ ಹಾಗೂ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಕೆಂಚನಕುಪ್ಪೆ ಜನತಾ ಕಾಲೋನಿಯಲ್ಲಿರುವ ದಾಸಪ್ಪ ಅವರ ಮನೆಗೆ ಭೇಟಿ ನೀಡಿದ್ದರು. ಮೃತ ಬಾಲಕ ಮದನ್‌ಗೆ ಸಾವಿಗೆ ಸಂತಾಪ ವ್ಯಕ್ತಪಡಿಸಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಡಿಕೆಶಿ- ಸಿದ್ದು ಒಗ್ಗೂಡಿಸುವ ಬೂಸ್ಟರ್ ಡೋಸ್ ಫೇಲ್ ಆಗಿದೆ: ಸಚಿವ ಶ್ರೀರಾಮುಲು
ಕಬ್ಬಿನ ಲಾರಿ ಪಲ್ಟಿ: ನಗರದ ಮುಡಿಗುಂಡ ಸೇತುವೆ ಮುಂಭಾಗದ ಸೇತುವೆ ಬಳಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಸುಮಾರು 1ಗಂಟೆಗಳಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮುಡಿಗುಂಡದ ಸೇತುವೆ ಮುಂಭಾಗದಲ್ಲಿ ಹಂಪಾಪುರ ಲಿಂಗೇಗೌಡರವರಿಗೆ ಸೇರಿದ ಲಾರಿಯು ಹನೂರು ಭಾಗದಿಂದ ಕಬ್ಬು ಲೋಡ್ ಮಾಡಿಕೊಂಡು ಬರುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಹೊಡೆದಿದೆ. ರಸ್ತೆ ಕುಸಿದದ್ದೆ ಪಲ್ಟಿಗೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ಜನ ದಟ್ಟಣೆ ಹೆಚ್ಚಾದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ