Tragedy: ಮದ್ಯಸೇವನೆ ಮಾಡಿದ 10ನೇ ತರಗತಿ ವಿದ್ಯಾರ್ಥಿ, ಮನೆಗೆ ಹೋಗಲು ಹೆದರಿ ದುರಂತ ಅಂತ್ಯ

Kannadaprabha News, Ravi Janekal |   | Kannada Prabha
Published : Feb 03, 2026, 03:31 PM IST
Tragedy: 10th-grade student dies after consuming alcohol and fearing home

ಸಾರಾಂಶ

ಬೆಂಗಳೂರಿನಲ್ಲಿ ಶಾಲಾ ಬೀಳ್ಕೊಡುಗೆ ಸಮಾರಂಭದ ನಂತರ ಪಬ್‌ನಲ್ಲಿ ಮದ್ಯ ಸೇವಿಸಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ, ಮನೆಗೆ ಹೋಗಲು ಹೆದರಿ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾನೆ. ಈ ಸಂಬಂಧ, ಅಪ್ರಾಪ್ತನಿಗೆ ಮದ್ಯ ನೀಡಿದ ಪಬ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಬೆಂಗಳೂರು (ಫೆ.3): ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬಏಳನೇ ಮಹಡಿಯಿಂದ ಹಾರಿ ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಆರ್‌.ಆರ್‌ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಾಲಕ ಖಾಸಗಿ ಶಾಲೆಯಲ್ಲಿ 10 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್‌.ಆರ್‌ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿದ್ದ ಬಾಲಕನನ್ನು ಆತನ ಸ್ನೇಹಿತ ವಿಷ್ಣುವರ್ಧನ್‌ ಸಮಾಧಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ವರೆಗೂ ಬಿಟ್ಟು ಹೋಗಿದ್ದ. ಆದರೆ ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಹೀಗಾಗಿ ಅಪಾರ್ಟ್‌ಮೆಂಟ್‌ನ 7 ಮಹಡಿಯಿಂದ ಹಾರಿ ಮೃತಪಟ್ಟಿದ್ದ.

ಜೆಜೆ-ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು:

ತನಿಖೆ ವೇಳೆ ಬಾಲಕ ಪಬ್‌ನಲ್ಲಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಜೆಜೆ ಕಾಯ್ದೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಂಜಾಬ್‌ನಲ್ಲಿ ಮತ್ತೊಂದು ಗುಂಡಿನ ದಾಳಿ: ಹಾಡಹಗಲೇ 23 ವರ್ಷದ ನವ ವಿವಾಹಿತೆಗೆ ಗುಂಡೇಟು : CCTVಯಲ್ಲಿ ದೃಶ್ಯ ಸೆರೆ
ಛೀ ಇದೆಂಥಾ ಅಸಹ್ಯ ! ತಂದೂರಿ ರೊಟ್ಟಿಗೆ ಎಂಜಲು ಹಾಕ್ತಿದ್ದ ಭೂಪ, ವಿಡಿಯೋ ವೈರಲ್