ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ದಾರುಣ ಸಾವು!

Published : Dec 19, 2024, 09:04 AM IST
ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ದಾರುಣ ಸಾವು!

ಸಾರಾಂಶ

ಕೋಲಾರದಿಂದ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವತಿಯರು ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ಕೊಪ್ಪಳ ಜಿಲ್ಲೆಯ ಬಾಲಕನೋರ್ವ ತೆರೆದ ಬಾವಿಗೆ ಅಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

ಭಟ್ಕಳ: ಕೋಲಾರದಿಂದ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವತಿಯರು ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ಕೊಪ್ಪಳ ಜಿಲ್ಲೆಯ ಬಾಲಕನೋರ್ವ ತೆರೆದ ಬಾವಿಗೆ ಅಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ(೧೪) ಎಂದು ಗುರುತಿಸಲಾಗಿದೆ.

ಉತ್ತರಕನ್ನಡ: ಮುರುಡೇಶ್ವರದ ಹೊಟೇಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ನಾಲ್ವರ ಬಂಧನ

ಗಾಣದಾಳ ಶಾಲೆಯ 100 ವಿದ್ಯಾರ್ಥಿಗಳು ಜೋಗ ಫಾಲ್ಸ್, ಕೊಲ್ಲೂರು ಮತ್ತಿತರ ಕಡೆ ಪ್ರವಾಸಕ್ಕೆ ಎರಡು ಬಸ್ಸುಗಳಲ್ಲಿ ಬಂದಿದ್ದರು. ಇವರೊಂದಿಗೆ 13 ಜನ ಶಿಕ್ಷಕರಿದ್ದರು. ಮಂಗಳವಾರ ರಾತ್ರಿ ಗಾಣದಾಳದಿಂದ ಹೊರಟಿದ್ದ ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ಜೋಗ ಜಲಪಾತ ವೀಕ್ಷಿಸಿ ನಂತರ ಕೊಲ್ಲೂರಿಗೆ ತೆರಳಲು ಹೊನ್ನಾವರ ಮಾರ್ಗವಾಗಿ ಆಗಮಿಸಿದ ಸಂದರ್ಭದಲ್ಲಿ ಮಾತ್ರೆ ಖರೀದಿಗಾಗಿ ಬಸ್ ನಿಲ್ದಾಣಕ್ಕಿಂತ ಸ್ವಲ್ಪ ದೂರದಲ್ಲಿ ಬಸ್ಸನ್ನು ನಿಲ್ಲಿಸಿ ತಾಲೂಕು ಪಂಚಾಯಿತಿ ಕಚೇರಿ ಎದುರಿನ ಔಷಧಿ ಅಂಗಡಿಯಲ್ಲಿ ಗುಳಿಗೆ ಖರೀದಿಸಲು ತೆರಳಿದ್ದರು. 

ಈ ಸಂದರ್ಭ ಕೆಲವು ಬಾಲಕರು ಮೂತ್ರ ವಿಸರ್ಜನೆಗೆಂದು ಔಷಧಿ ಅಂಗಡಿಯ ಹಿಂದಿರುವ ಖುಲ್ಲಾ ಜಾಗಕ್ಕೆ ತೆರಳಿದ್ದ ಸಂದರ್ಭದಲ್ಲಿ ಕತ್ತಲಾಗಿದ್ದರಿಂದ ತಡೆಗೋಡೆ ಇಲ್ಲದ ತೆರೆದ ಬಾವಿಗೆ ಅಕಸ್ಮಾತ್ ಬಾಲಕ ಬಿದ್ದಿದ್ದಾನೆ. ತಕ್ಷಣ ಜತೆಗಿದ್ದ ಬಾಲಕರು ಕೂಗಿದ್ದರಿಂದ ಸ್ಥಳೀಯರು ದೌಡಾಯಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕನನ್ನು ಬಾವಿಯಿಂದ ಮೇಲಕ್ಕೆತ್ತಿ ತಕ್ಷಣ ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಸ್ಪಂದಿಸದೆ ಮೃತಪಟ್ಟಿದ್ದಾನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ