Tragic Death: ಸಚಿವ ಕೆಎನ್‌ ರಾಜಣ್ಣ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು!

Published : Jun 21, 2025, 06:56 PM ISTUpdated : Jun 21, 2025, 07:03 PM IST
KN Rajanna Birthday

ಸಾರಾಂಶ

ಸಚಿವ ರಾಜಣ್ಣ ಅವರ ಹುಟ್ಟುಹಬ್ಬಕ್ಕೆ ಬಂದಿದ್ದ ಮಹಿಳೆ ಬಸ್‌ನಲ್ಲಿ ಸಾವು. ತುಮಕೂರಿನಿಂದ ವಾಪಸ್ಸಾಗುವಾಗ ಗುಬ್ಬಿ ಬಳಿ ಸಂಭವಿಸಿದ ದುರ್ಘಟನೆ.

ತುಮಕೂರು (ಜೂ.21): ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತುಮಕೂರಿಗೆ ಬಂದಿದ್ದ 55 ವರ್ಷದ ಸುನಂದಮ್ಮ ಎಂಬ ಮಹಿಳೆ, ಕಾರ್ಯಕ್ರಮ ಮುಗಿಸಿ ಊರಿಗೆ ವಾಪಸ್ ಹೋಗುವಾಗ ಬಸ್‌ನಲ್ಲೇ ಹೃದಯಾಘಾತದಿಂದ ಸಾವನಪ್ಪಿದ ದಾರುಣ ಘಟನೆ ಗುಬ್ಬಿ ಬಳಿ ನಡೆದಿದೆ.

ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ಗ್ರಾಮದ ನಿವಾಸಿಯಾದ ಸುನಂದಮ್ಮ, ಗ್ರಾಮದ ಇತರ ಮಹಿಳೆಯರೊಂದಿಗೆ ಬೆಳಗ್ಗೆ ಬಸ್‌ನಲ್ಲಿ ತುಮಕೂರಿನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾರ್ಯಕ್ರಮದ ವೇಳೆ ತಲೆಸುತ್ತು ಎಂದು ತಿಳಿಸಿದ್ದ ಸುನಂದಮ್ಮ, ಊಟ ಮುಗಿಸಿ ವಾಪಸ್ ಗ್ರಾಮಕ್ಕೆ ಹೋಗುವ ಮಾರ್ಗಮಧ್ಯೆ ಗುಬ್ಬಿ ಸಮೀಪ ಸಾವನಪ್ಪಿದ್ದಾರೆ.

ಮೃತದೇಹವನ್ನು ಬಸ್‌ನಿಂದ ಇಳಿಸಿ ಗುಬ್ಬಿ ಶವಗಾರಕ್ಕೆ ರವಾನಿಸಲಾಗಿದೆ. ಗುಬ್ಬಿ ತಹಶೀಲ್ದಾರ್ ಸಮ್ಮುಖದಲ್ಲಿ ಪೊಲೀಸರು ಶವವನ್ನು ತೆಗೆದುಕೊಂಡು ಹೋಗಿದ್ದಾರೆ. ರಾಜಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಗ್ರಾಮೀಣ ಭಾಗದಿಂದ ಬಸ್‌ಗಳ ಮೂಲಕ ಜನರನ್ನು ಕರೆತರಲಾಗಿತ್ತು ಎನ್ನಲಾಗಿದೆ. ಈ ಘಟನೆಯಿಂದ ಸೀಗೆಹಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ಮನೆಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ